ಭಾನುವಾರ, ಏಪ್ರಿಲ್ 18, 2021
29 °C

ನೈಟಿಂಗೇಲ್ ದಾದಿಯರ ಪ್ರಶಸ್ತಿ: ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯಮಟ್ಟದ ಫ್ಲಾರೆನ್ಸ್‌ ನೈಟಿಂಗೇಲ್‌ ಶುಶ್ರೂಷಕರ ಪ್ರಶಸ್ತಿಗೆ ಆಂಗ್ಲೊ ಇಂಡಿಯನ್‌ ಯುನಿಟಿ ಸೆಂಟರ್‌ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಮೇ 12ರಂದು ನಡೆಯಲಿರುವ ಅಂತರರಾಷ್ಟ್ರೀಯ ಶುಶ್ರೂಷಕರ ದಿನಾಚರಣೆಯ ವೇಳೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

10 ಮಂದಿ ಸ್ಟಾಫ್‌ ನರ್ಸ್‌, ಒಬ್ಬರು ಪ್ರಾಚಾರ್ಯ ಅಥವಾ ಉಪನ್ಯಾಸಕರು ಮತ್ತು ಒಬ್ಬರು ನರ್ಸಿಂಗ್‌ ಸೂಪರಿಂಟೆಂಡೆಂಟ್‌ಗೆ ಪ್ರಶಸ್ತಿ ನೀಡಲಾಗುತ್ತದೆ. ಇದೇ ತಿಂಗಳ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನ.

ಮಾಹಿತಿಗೆ, ಎಲ್ಲ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು