ಗುರುವಾರ , ಫೆಬ್ರವರಿ 20, 2020
25 °C

ನಿಮ್ಹಾನ್ಸ್‌ ವಿಜ್ಞಾನ ದಿನ 12ರಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌) ವತಿಯಿಂದ ಸಂಸ್ಥೆಯ ಸಮಾವೇಶ ಕೇಂದ್ರದಲ್ಲಿ ಇದೇ 12 ಮತ್ತು 13ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಏರ್ಪಡಿಸಲಾಗಿದೆ’ ಎಂದು ಸಂಸ್ಥೆಯ ನಿರ್ದೇಶಕ ಬಿ.ಎನ್‌.ಗಂಗಾಧರ್‌ ತಿಳಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಸಂಸ್ಥೆಯು ಈ ಬಾರಿ ನರವಿಜ್ಞಾನ (ನ್ಯೋರೊ ಸೈನ್ಸ್) ಕುರಿತು ಜನರಿಗೆ ಮಾಹಿತಿ ನೀಡಲಿದೆ. ನರವಿಜ್ಞಾನಕ್ಕೆ ಸಂಬಂಧಿಸಿದ ವಸ್ತು ಪ್ರದರ್ಶನವನ್ನು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಹಮ್ಮಿಕೊಳ್ಳಲಾಗಿದೆ’ ಎಂದರು.

‘ಮಿದುಳು ಸೋಂಕು, ಅರಿವು ಮತ್ತು ನಿದ್ರೆ, ಮಾನಸಿಕ ಆರೋಗ್ಯ, ಮಿದುಳು ಮತ್ತು ಕ್ಯಾನ್ಸರ್‌ ವಿಷಯ ಕುರಿತಂತೆ ಜನರು ಮಾಹಿತಿ ಪಡೆಯಬಹುದು. ಟಿವಿಎಸ್‌ ಸಮೂಹಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿರುವ ಕಾರ್ಯಾಗಾರದಲ್ಲಿ ಪಾರ್ಶ್ವವಾಯು (ಸ್ಟ್ರೋಕ್) ಬಗ್ಗೆ ಮಾಹಿತಿ ನೀಡಲಾಗುವುದು. ಪ್ರವೇಶ ಉಚಿತ’ ಎಂದು ಮಾಹಿತಿ ನೀಡಿದರು.

‘ಸಂಸ್ಥೆಯ ಸಾಧಕರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು. ಎರಡೂ ದಿನಗಳೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸ್ಪರ್ಧೆಗಳು ನಡೆಯಲಿವೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು