ಬೆಂಗಳೂರು: ತಂತ್ರಜ್ಞಾನ ಆಧಾರಿತ ಮಾನಸಿಕ ಆರೋಗ್ಯ ಸೇವೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ಜತೆಗೆ ಎಚ್ಎಲ್ಎಲ್ ಲೈಫ್ಕೇರ್ ಲಿಮಿಟೆಡ್ ಒಡಂಬಡಿಕೆ ಮಾಡಿಕೊಂಡಿದೆ.

ಮಾನಸಿಕ ಆರೋಗ್ಯ ಬಲಪಡಿಸುವುದು ಈ ಒಡಂಬಡಿಕೆಯ ಉದ್ದೇಶವಾಗಿದೆ. ಈ ಒಡಂಬಡಿಕೆಯಡಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಆರೋಗ್ಯ ವೃತ್ತಿಪರರಿಗೆ ಸಾಮರ್ಥ್ಯ ವೃದ್ಧಿಸುವುದು, ಮಾನಸಿಕ ಆರೋಗ್ಯ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಮಾನಸಿಕ ಆರೋಗ್ಯ ನೀತಿಗಳನ್ನು ರೂಪಿಸಲು ಈ ಒಪ್ಪಂದ ಸಹಕಾರಿ ಎಂದು ಸಂಸ್ಥೆ ತಿಳಿಸಿದೆ.

ಕೌಟುಂಬಿಕ ಸಮಸ್ಯೆ, ಆರ್ಥಿಕ ಸಂಕಷ್ಟ, ಉದ್ಯೋಗ ನಷ್ಟ, ಶೈಕ್ಷಣಿಕ ಒತ್ತಡ ಸೇರಿ ವಿವಿಧ ಕಾರಣಗಳಿಂದ ಎಲ್ಲ ವಯೋಮಾನದವರು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾನಸಿಕ ಅನಾರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಈ ಸಮಸ್ಯೆಗಳ ನಿವಾರಣೆಗೆ ತಂತ್ರಜ್ಞಾನ ಆಧಾರಿತ ಪರಿಹಾರೋಪಾಯ ಕಂಡುಕೊಳ್ಳಲು ಈ ಒಡಂಬಡಿಕೆ ಸಹಕಾರಿ ಎಂದು ಎಚ್ಎಲ್ಎಲ್ ಲೈಫ್ಕೇರ್ ಲಿಮಿಟೆಡ್ ಉಪಾಧ್ಯಕ್ಷ (ಮಾರುಕಟ್ಟೆ) ಉನ್ನಿಕೃಷ್ಣನ್ ಎಸ್.ಎಂ. ತಿಳಿಸಿದರು.

ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ, ಪ್ರಾಧ್ಯಾಪಕ ಡಾ.ಸಿ.ನವೀನ್ ಕುಮಾರ್, ಎಚ್ಎಲ್ಎಲ್ ಲೈಫ್ಕೇರ್ ಲಿಮಿಟೆಡ್ ವ್ಯವಸ್ಥಾಪಕ ಜಗದೀಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.