ಕರ್ನಾಟಕದ ಆತ್ಮಹತ್ಯೆ ಪ್ರಮಾಣವು (ಶೇ 20.2) ರಾಷ್ಟ್ರೀಯ ಸರಾಸರಿಕ್ಕಿಂತ (ಶೇ 12.4) ಅಧಿಕವಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ಪ್ರಕಾರ ರಾಜ್ಯದಲ್ಲಿ ವಾರ್ಷಿಕ 13606 ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ. ಅಧಿಕ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿರುವ ದೇಶದ ಮಹಾನಗರಗಳಲ್ಲಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೈದ್ಯಕೀಯ ತಜ್ಞರು ಕಳವಳ ವ್ಯಕ್ತಪಡಿಸಿದರು.