ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ನಗರ ಕ್ಷೇತ್ರ ಪರಿಷತ್ ಚುನಾವಣೆ: ಶೇ 99.86 ಮತದಾನ

Last Updated 10 ಡಿಸೆಂಬರ್ 2021, 21:26 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಯಲ್ಲಿ ಶೇ 99.86 ರಷ್ಟು ಮತದಾನವಾಗಿದೆ.

‘86 ಮತಗಟ್ಟೆಗಳಲ್ಲಿ ಮತದಾನ ನಡೆದಿದೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಶಾಂತಿಯುತವಾಗಿ ಮತದಾನ ನಡೆದಿದೆ’ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜೆ.ಮಂಜುನಾಥ್ ತಿಳಿಸಿದ್ದಾರೆ.

‘ಒಟ್ಟು 2,073 ಮತದಾರರಲ್ಲಿ 2,070 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇದರಲ್ಲಿ 992 ಪುರುಷ ಮತದಾರರು, 1077 ಮಹಿಳಾ ಮತದಾರರು ಹಾಗೂ ಇತರೆ ಒಬ್ಬ ಮತದಾರರು ಮತದಾನ ಮಾಡಿದ್ದಾರೆ’ ಎಂದು ತಿಳಿಸಿದ್ದಾರೆ.

ಬೆಳಿಗ್ಗೆ ನೀರಸವಾಗಿ ನಡೆದ ಮತದಾನ ಮಧ್ಯಾಹ್ನದ ವೇಳೆಗೆ ಚುರುಕು ಪಡೆದುಕೊಂಡಿತು. ಸಂಜೆ ವೇಳೆಗೆ ಬಹುತೇಕ ಮತಗಟ್ಟೆಗಳಲ್ಲಿ ಶೇಕಡ 100ರಷ್ಟು ಮತದಾನವಾಗಿದೆ.

ಬೆಳಿಗ್ಗೆ 8 ಗಂಟೆಯಿಂದ ಆರಂಭವಾದ ಮತದಾನ ಸಂಜೆ 4 ಗಂಟೆಯವರೆಗೆ ನಡೆಯಿತು. ಗ್ರಾಮ ಪಂಚಾಯತಿಯ ಹಲವು ಸದಸ್ಯರು ಪರಿಷತ್ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡಿದರು.

ಮತಗಟ್ಟೆಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸಲಾಗಿತ್ತು. ಮತದಾರರನ್ನು ಥರ್ಮಲ್‌ ಸ್ಕ್ಯಾನಿಂಗ್ ಮೂಲಕ ತಪಾಸಣೆ ನಡೆಸಲಾಗುತ್ತಿತ್ತು.

ನೆಲಮಂಗಲ ತಹಶೀಲ್ದಾರ್ ಮಂಜುನಾಥ್ ಸೋಂಪುರ ಮತ್ತು ತ್ಯಾಮಗೊಂಡ್ಲು ಹೋಬಳಿಯ ಹಲವಾರು ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಂಗ್ರೆಸ್‌ನಿಂದ ಯೂಸುಫ್‌ ಷರೀಫ್‌ (ಕೆಜಿಎಫ್‌ ಬಾಬು) ಮತ್ತು ಬಿಜೆಪಿಯಿಂದ ಎಚ್‌.ಎಸ್. ಗೋಪಿನಾಥ್‌ ಸ್ಪರ್ಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT