ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಫಾ: ಕೇರಳ ಗಡಿಯಲ್ಲಿ ಎಚ್ಚರ ವಹಿಸಲು ಸೂಚನೆ

Published 13 ಸೆಪ್ಟೆಂಬರ್ 2023, 16:10 IST
Last Updated 13 ಸೆಪ್ಟೆಂಬರ್ 2023, 16:10 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಕ್ಕೆ ಹೊಂದಿಕೊಂಡಿರುವ ಕೇರಳ ಗಡಿ ಪ್ರದೇಶದಲ್ಲಿ ನಿಫಾ ವೈರಾಣುವಿನ ಶಂಕೆ ವ್ಯಕ್ತವಾಗಿರುವುದರಿಂದ ರೋಗ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. 

ದಕ್ಷಿಣ ಕನ್ನಡದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳು ಶಂಕಿತ ನಿಫಾ ಪ್ರಕರಣಗಳನ್ನು ದಾಖಲಿಸಿಕೊಂಡು, ಜಿಲ್ಲಾ ಕಣ್ಗಾವಲು ಘಟಕಕ್ಕೆ ಮಾಹಿತಿ ಒದಗಿಸಬೇಕು. ಕ್ಷಿಪ್ರ ಪ್ರತಿಕ್ರಿಯೆ ತಂಡ ಸಭೆಗಳನ್ನು ನಡೆಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಮತ್ತು ಎಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ನಿಫಾ ಪ್ರಕರಣಗಳ ನಿರ್ವಹಣೆಗೆ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಕಾಯ್ದಿರಿಸಬೇಕು. ಅಗತ್ಯ ಔಷಧಗಳ ಶೇಖರಣೆ ಮತ್ತು ನಿಫಾ ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆಗೆ ಸಂಬಂಧಿಸಿದಂತೆ ಕ್ಷೇತ್ರ ಸಿಬ್ಬಂದಿಗೆ ತರಬೇತಿ ನೀಡುವ ವ್ಯವಸ್ಥೆ ಜಾರಿಮಾಡಬೇಕು ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ. 

ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳಲ್ಲಿ ವರದಿಯಾಗುವ ನಿಫಾ ಶಂಕಿತ ಪ್ರಕರಣಗಳ ಮಾದರಿಯನ್ನು ಪುಣೆಯ ಎನ್‌ಐವಿ ಪ್ರಯೋಗಾಲಯಕ್ಕೆ ಕಳುಹಿಸಲು ವ್ಯವಸ್ಥೆ ಮಾಡಬೇಕು. ಸಾರ್ವಜನಿಕರಿಗೆ ರೋಗದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಈವರೆಗೆ ನಿಫಾ ಮರಣ ಪ್ರಕರಣ ವರದಿಯಾಗಿಲ್ಲ. ಆದರೂ ಬಾವಲಿ ಹಾಗೂ ಪ್ರಾಣಿಗಳಿಂದ ಬರುವ ಈ ರೋಗದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT