ಸೋಮವಾರ, ಆಗಸ್ಟ್ 8, 2022
23 °C

ನಿರ್ಮಲಾ ಆಸ್ತಿ ₹2.50 ಕೋಟಿ, ಕುಪೇಂದ್ರ ರೆಡ್ಡಿ ₹817 ಕೋಟಿ ಒಡೆಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಮಂಗಳವಾರ ನಾಮಪತ್ರ ಸಲ್ಲಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ₹2.50 ಕೋಟಿ ಆಸ್ತಿ ಹೊಂದಿದ್ದರೆ, ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಸಿರುವ ಡಿ.ಕುಪೇಂದ್ರ ರೆಡ್ಡಿ ₹817 ಕೋಟಿ ಆಸ್ತಿ ಹೊಂದಿದ್ದಾರೆ.

2016ರಲ್ಲಿ ನಾಮಪತ್ರ ಸಲ್ಲಿಸುವಾಗ ನಿರ್ಮಲಾ ಅವರ ಆಸ್ತಿ ₹1.35 ಕೋಟಿ ಇತ್ತು. ನಿರ್ಮಲಾ ಬಳಿ 2001 ರ
ಮಾಡೆಲ್‌ ಬಜಾಜ್‌ ಚೇತಕ್‌ ಸ್ಕೂಟರ್‌ ಇದೆ. ಸ್ವಂತಕ್ಕೆ ಕಾರು ಇಲ್ಲ. 315 ಗ್ರಾಂ ಚಿನ್ನ, 2 ಕೆ.ಜಿ. ಬೆಳ್ಳಿ ಹೊಂದಿದ್ದಾರೆ. ಆಂಧ್ರದ ರಂಗಾರೆಡ್ಡಿ ಜಿಲ್ಲೆಯ ಕುಂಟಲೂರಿನಲ್ಲಿ 4,806 ಚದರಡಿ ಕೃಷಿಯೇತರ ಜಮೀನು ಹೊಂದಿರುವುದಾಗಿ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ಕುಪೇಂದ್ರ ರೆಡ್ಡಿ ಅವರ ಆಸ್ತಿ ಕಳೆದ ಎಂಟು ವರ್ಷಗಳಲ್ಲಿ ಶೇ 76ರಷ್ಟು ಹೆಚ್ಚಳವಾಗಿದೆ. ಹಿಂದೆ ₹462 ಕೋಟಿ ಇತ್ತು. ಈಗ ₹817 ಕೋಟಿಗೆ ಏರಿಕೆಯಾಗಿದೆ. ರೆಡ್ಡಿ ಕುಟುಂಬ ₹417 ಕೋಟಿ ಚರಾಸ್ತಿ, ₹399 ಕೋಟಿ ಸ್ಥಿರಾಸ್ತಿಯನ್ನು ಹೊಂದಿದೆ. ಮೂಲಸೌಕರ್ಯ ಅಭಿವೃದ್ಧಿಗಾರ ಎಂದು ಹೇಳಿಕೊಂಡಿದ್ದಾರೆ. ಈ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪೈಕಿ ಕುಪೇಂದ್ರ ರೆಡ್ಡಿ ಅತಿ ಹೆಚ್ಚು ಶ್ರೀಮಂತ ಅಭ್ಯರ್ಥಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು