‘ಸುರಕ್ಷಿತ ನಗರ’ ಗುತ್ತಿಗೆ ಜಟಾಪಟಿ; ರೂಪಾ, ನಿಂಬಾಳ್ಕರ್ ಎತ್ತಂಗಡಿ

ಬೆಂಗಳೂರು: ನಿರ್ಭಯಾ ನಿಧಿಯಡಿ ರೂಪಿಸಲಾದ ‘ಸುರಕ್ಷಿತ ನಗರ’ ಯೋಜನೆ ಗುತ್ತಿಗೆ ವಿಚಾರವಾಗಿ ಜಟಾಪಟಿ ನಡೆಸಿದ್ದ ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಅವರನ್ನು ಹುದ್ದೆಯಿಂದ ಎತ್ತಂಗಡಿ ಮಾಡಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಗೃಹ ಇಲಾಖೆ ಕಾರ್ಯದರ್ಶಿ ಆಗಿದ್ದ ರೂಪಾ ಅವರನ್ನು ರಾಜ್ಯ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
‘ಗುತ್ತಿಗೆ ಹಂಚಿಕೆಯಲ್ಲಿ ಅಕ್ರಮ ನಡೆದಿದೆ’ ಎನ್ನಲಾದ ಯೋಜನೆಯ ಟೆಂಡರ್ ಆಹ್ವಾನ ಸಮಿತಿ ಅಧ್ಯಕ್ಷರೂ ಆಗಿದ್ದ ಬೆಂಗಳೂರು ನಗರ ಹೆಚ್ಚುವರಿ ಕಮಿಷನರ್ (ಆಡಳಿತ) ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸಲಾಗಿದೆ.
ಮಕ್ಕಳು ಹಾಗೂ ಮಹಿಳೆಯರ ಸುರಕ್ಷತೆಗಾಗಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ ಹಾಗೂ ತುರ್ತು ಸೇವಾ ನಿಯಂತ್ರಣ ಕೊಠಡಿ ನಿರ್ಮಾಣ ಸೇರಿ ವಿವಿಧ ಕೆಲಸಗಳನ್ನು ಕೈಗೊಳ್ಳಲು ನಿರ್ಭಯಾ ನಿಧಿ ಮೀಸಲಿಡಲಾಗಿದೆ. ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ’ಸುರಕ್ಷಿತ ನಗರ’ ಯೋಜನೆ ಜಾರಿಗೆ ತರಲಾಗಿದ್ದು, ಮೊದಲ ಹಂತದಲ್ಲಿ ₹ 612 ಕೋಟಿ ಮೌಲ್ಯದ ಕೆಲಸಕ್ಕೆ ಟೆಂಡರ್ ಪ್ರಕ್ರಿಯೆ
ಆರಂಭವಾಗಿತ್ತು.
‘ಟೆಂಡರ್ ಹಂಚಿಕೆಯಲ್ಲಿ ಅಕ್ರಮ ನಡೆದಿದೆ’ ಎಂದು ಡಿ.ರೂಪಾ ಆರೋಪಿಸಿದ್ದರು. ಇದೇ ವಿಚಾರವಾಗಿ ರೂಪ ಮತ್ತು ನಿಂಬಾಳ್ಕರ್ ನಡುವೆ ಜಟಾಪಟಿ ನಡೆದಿತ್ತು.
ಇದನ್ನೂ ಓದಿ– ಸಂಪಾದಕೀಯ: ಐಪಿಎಸ್ ಅಧಿಕಾರಿಗಳ ಕಚ್ಚಾಟ ತಡೆಗೆ ಕಠಿಣ ಕ್ರಮ ಅಗತ್ಯ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.