ಭಾನುವಾರ, ಜನವರಿ 26, 2020
27 °C

ನಿತ್ಯಾನಂದ ಅರ್ಜಿ ವಿಚಾರಣೆ ಮುಂದಕ್ಕೆ: ತಡೆ ಆದೇಶ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅತ್ಯಾಚಾರ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧ ರಾಮನಗರ ಸೆಷನ್ಸ್ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ನೀಡಿದ್ದ ಮಧ್ಯಂತರ ತಡೆ ಆದೇಶವನ್ನು ಹೈಕೋರ್ಟ್ ಜನವರಿ 10ರವರೆಗೆ ವಿಸ್ತರಿಸಿದೆ.

‘ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು’ ಎಂದು ಕೋರಿ ದೂರುದಾರ ಲೆನಿನ್ ಕುರುಪ್ಪನ್ ಸಲ್ಲಿಸಿರುವ ಅರ್ಜಿ ನ್ಯಾಯಮೂರ್ತಿ ಜಿ. ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ನಿಗದಿಯಾಗಿತ್ತು. ದಿನದ ಕೋರ್ಟ್ ಕಲಾಪದ ಅವಧಿ ಮುಕ್ತಾಯವಾದ ಕಾರಣ ವಿಚಾರಣೆ ಮುಂದೂಡಿದ ಪೀಠ, ಅಧೀನ ನ್ಯಾಯಾಲಯದ ವಿಚಾರಣೆಗೆ ಈ ಮೊದಲು ನೀಡಿದ್ದ ತಡೆ ಆದೇಶವನ್ನು ವಿಸ್ತರಿಸಿತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು