ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಶನಿವಾರ ರಾತ್ರಿ ನಗರಕ್ಕೆ ಬಂದಿದ್ದು, ಭಾನುವಾರ ನಡೆಯಲಿರುವ ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಪಕ್ಷದ ವರಿಷ್ಠರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಮೌಲ್ಯಮಾಪನ ನಡೆಸುತ್ತಿರುವ ಕಾರಣಕ್ಕೆ ಈ ಭೇಟಿ ಮಹತ್ವ ಪಡೆದಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ನಿತಿನ್ ಅವರಿಗಾಗಿ ಬಿಜೆಪಿ ಸಂಸದೀಯ ಸಲಹಾ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಮನೆಯಲ್ಲಿ ಭಾನುವಾರ ಬೆಳಿಗ್ಗೆ ಉಪಾಹಾರ ಏರ್ಪಡಿಸಲಾಗಿದೆ. ಇದೇ ವೇಳೆ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಅವರು ಯಡಿಯೂರಪ್ಪ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ಗೊತ್ತಾಗಿದೆ.

ನಂತರ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11.30ಕ್ಕೆ ನಿತಿನ್ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ, ವಿರೋಧ ಪಕ್ಷದ ನಾಯಕ, ರಾಜ್ಯ ಉಸ್ತುವಾರಿ, ಸಹ ಉಸ್ತುವಾರಿ, ಪ್ರಮುಖರ ಸಮಿತಿ ಸದಸ್ಯರು, ಶಾಸಕರು ಮತ್ತು ಸಂಸದರ ಜತೆಗೆ ರಾಜ್ಯ ರಾಜಕಾರಣ ಕುರಿತು ಚರ್ಚಿಸಲಿದ್ದಾರೆ. ಮಧ್ಯಾಹ್ನ 3ಗಂಟೆಗೆ ಪಕ್ಷದ ಪ್ರಮುಖರ ಸಮಿತಿ ಸದಸ್ಯರ ಜತೆಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.