ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಖಲೆ ಇಲ್ಲದ ₹ 7 ಲಕ್ಷ ಜಪ್ತಿ

Last Updated 26 ಅಕ್ಟೋಬರ್ 2020, 20:28 IST
ಅಕ್ಷರ ಗಾತ್ರ

ಬೆಂಗಳೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 7 ಲಕ್ಷ ಹಣವನ್ನು ನಗರದ ಪೊಲೀಸರು ಜಪ್ತಿ ಮಾಡಿದ್ದಾರೆ.

‘ರಾಜರಾಜೇಶ್ವರಿನಗರ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಜ್ಞಾನಭಾರತಿ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ದ್ವಿಚಕ್ರ ವಾಹನವೊಂದನ್ನು ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.

‘ರಮೇಶ್ ಮತ್ತು ಮಾಣಿಕ್‌ ಚಾಂದ್ ಎಂಬುವರು ಹಣ ತೆಗೆದುಕೊಂಡು ಹೊರಟಿದ್ದರು. ತಾವು ಚಿನ್ನಾಭರಣ ವ್ಯಾಪಾರಿಗಳೆಂದು ಅವರು ಹೇಳಿಕೊಂಡರು. ಹಣವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದರು. ಆದರೆ, ಹಣಕ್ಕೆ ಯಾವುದೇ ದಾಖಲೆ ನೀಡಲಿಲ್ಲ. ಹೀಗಾಗಿ, ಹಣವನ್ನು ಜಪ್ತಿ ಮಾಡಲಾಗಿದೆ. ನ್ಯಾಯಾಲಯದಿಂದಲೇ ಅವರು ಹಣ ಬಿಡಿಸಿಕೊಳ್ಳಬೇಕು’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT