ಗುರುವಾರ , ಆಗಸ್ಟ್ 5, 2021
21 °C

ನಾಳೆ ವಿದ್ಯುತ್ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಗೌರಿಬಿದನೂರು ಮತ್ತು ಮಟ್ಟೆಮಿರಿ 220/66/11 ಕೆ.ವಿ.ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಶುಕ್ರವಾರ (ಜೂನ್ 19) ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವತಿಯಿಂದ ನಿರ್ವಹಣಾ ಕಾಮಗಾರಿ ಕೈಗೊಂಡಿರು ವುದರಿಂದ ಈ ವಿದ್ಯುತ್ ಸ್ವೀಕರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾ ಜಾಗುವ ಗೌರಿಬಿದ ನೂರು, ಗುಡಿಬಂಡೆ, ಬಾಗೇಪಲ್ಲಿ, ತಿಮ್ಮಂಪಲ್ಲಿ, ಸೋಮನಾಥಪುರ, ಪಾತಪಾಳ್ಯ, ಜೂಲಪಾಳ್ಯ, 66/11 ಕೆ.ವಿ. ಉಪ ವಿದ್ಯುತ್ ಕೇಂದ್ರಗಳಿಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ.

ಈ ಉಪ ವಿದ್ಯುತ್ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಗೌರಿಬಿದನೂರು, ಗುಡಿಬಂಡೆ, ಬಾಗೇ
ಪಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ, ಮಂಡಿಕಲ್ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ಜೂನ್ 19 ರಂದು ಬೆಳಿಗ್ಗೆ 10 ರಿಂದ ಸಂಜೆ 6ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು