ಶನಿವಾರ, ಆಗಸ್ಟ್ 13, 2022
25 °C

ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ‘ಸಾಕುನಾಯಿಗಳಿಗೆ ನಿರ್ಬಂಧ’ ಫಲಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ವಾಯುವಿಹಾರಕ್ಕೆ ಸಾಕು ನಾಯಿಗಳನ್ನು ಕರೆದೊಯ್ಯದಂತೆ ನಿರ್ಬಂಧ ಹೇರಲಾಗಿದೆ ಎಂಬ ಫಲಕಗಳನ್ನು ತೋಟಗಾರಿಕೆ ಇಲಾಖೆ ಅಳವಡಿಸಿದೆ.

ಜುಲೈ 1ರಿಂದ ಸಾಕುನಾಯಿಗಳನ್ನು ಕರೆತರಬಾರದು ಎಂದು ತಿಳಿಸಲಾಗಿದೆ. ನಾಯಿಗಳು ಪದೇ ಪದೇ ತೊಂದರೆ ನೀಡುತ್ತಿರುವ ಬಗ್ಗೆ ವಾಯುವಿಹಾರಿಗಳಿಂದ ದೂರುಗಳು ಸಲ್ಲಿಕೆಯಾಗಿರುವುದರಿಂದ ನಿಷೇಧ ಹೇರುವ ಬಗ್ಗೆ ತೋಟಗಾರಿಕೆ ಇಲಾಖೆ ಪ್ರಸ್ತಾವನೆ ಸಿದ್ಧಪಡಿಸಿದೆ.

ಉದ್ಯಾನಗಳು ಮತ್ತು ಸಾರ್ವಜನಿಕ ಸ್ಥಳಗಳ ನಿಯಮಾವಳಿಗಳ ಅನ್ವಯ ನಿಷೇಧ ಹೇರುವ ಕುರಿತು ತೋಟಗಾರಿಕೆ ಸಚಿವರನ್ನು ಒಳಗೊಂಡ ಸಮಿತಿಯು ಮುಂದಿನ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆದಕ್ಕೂ ಮೊದಲೇ ಫಲಕಗಳನ್ನು ಅಳವಡಿಸಲಾಗಿದ್ದರೂ ಜುಲೈ 1ರಿಂದ ಜಾರಿಗೆ ಬರುವುದಿಲ್ಲ. ಸಮಿತಿಯು ಶೀಘ್ರವೇ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು