ಬೆಂಗಳೂರು: ಈಗಿರುವ ಸಾಮಾನ್ಯ ಆಜೀವ ಸದಸ್ಯತ್ವದ ಶುಲ್ಕ ₹500 ಎಂದಿನಂತೆ ಮುಂದುವರಿಯಲಿದೆ. ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಸ್ಪಷ್ಟನೆ ನೀಡಿದ್ದಾರೆ.
41ನೇ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ತೆಗೆದುಕೊಂಡಿರುವ ಕೆಲವು ನಿರ್ಧಾರ ಕುರಿತಂತೆ ಅವರು ಸ್ಪಷ್ಟೀಕರಣ ನೀಡಿದ್ದು, ‘ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ತುಂಬ ಬೇಕಾದ ಠೇವಣಿಯನ್ನು ₹5 ಸಾವಿರದಿಂದ ₹ 50 ಸಾವಿರಕ್ಕೆ ಹೆಚ್ಚಿಸಲು ಸಭೆ ತೀರ್ಮಾನ ಕೈಗೊಂಡಿದೆ. ಈಗಿನ ಅವಧಿ ಮುಗಿದ ನಂತರ ಮುಂದಿನ ಅವಧಿಗೆ ನಡೆಯುವ ಚುನಾವಣೆಯಲ್ಲಿ ಆಯ್ಕೆಯಾಗಿ ಬರುವ ಅಧ್ಯಕ್ಷರ ಅಧಿಕಾರ ಅವಧಿಯನ್ನು ಈಗಿರುವ 3 ವರ್ಷಗಳಿಂದ 5 ವರ್ಷಗಳಿಗೆ ವಿಸ್ತರಿಸಲು ಸರ್ವ ಸದಸ್ಯರ ಸಭೆ ತೀರ್ಮಾನ ಕೈಗೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.