ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನಶಂಕರಿಯಲ್ಲಿ ಚಿರತೆ ಇಲ್ಲ: ವನ್ಯಜೀವಿ ತಜ್ಞರು

Last Updated 10 ಜೂನ್ 2020, 9:36 IST
ಅಕ್ಷರ ಗಾತ್ರ

ಬೆಂಗಳೂರು: ‘ಬನಶಂಕರಿಯಲ್ಲಿ ಕೆಲವು ಗಂಟೆಗಳ ಹಿಂದೆ ಸುಂದರ ಪ್ರಾಣಿಯೊಂದು ಕಾಣಿಸಿಕೊಂಡಿದೆ. ಆ ಪ್ರದೇಶದಲ್ಲಿ ಓಡಾಡುವವರು ಜಾಗೃತಿಯಿಂದಿರಬೇಕು’ ಎಂಬ ವಾಕ್ಯಗಳ ಜೊತೆಗೆ, ಚಿರತೆ ಮರಿಯ ಚಿತ್ರವಿರುವ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ’ಇದು ಸುಳ್ಳು ಸುದ್ದಿ. ಸಾರ್ವಜನಿಕರು ಆತಂಕ ಪಡಬೇಕಾದ ಅಗತ್ಯವಿಲ್ಲ‘ ಎಂದು ವನ್ಯಜೀವಿ ವಿಜ್ಞಾನಿಗಳು ಹೇಳಿದ್ದಾರೆ.

‘ಚಿರತೆ ಮರಿ ಇರುವ ಈ ಚಿತ್ರವನ್ನು 2019ರ ಡಿಸೆಂಬರ್‌ನಲ್ಲಿ ಕ್ಯಾಮರಾ ಟ್ರ್ಯಾಪ್‌ನಲ್ಲಿ ಸೆರೆಹಿಡಿಯಲಾಗಿದೆ. ತುಮಕೂರು ಜಿಲ್ಲೆಯ ಹೆಬ್ಬೂರು ಪ್ರದೇಶದಲ್ಲಿ ತೆಗೆಯಲಾಗಿರುವ ಚಿತ್ರವಿದು’ ಎಂದು ವನ್ಯಜೀವಿ ವಿಜ್ಞಾನಿ ಸಂಜಯ್‌ ಗುಬ್ಬಿ ಹೇಳಿದ್ದಾರೆ.

‘ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸುವುದರಿಂದ ಸಾರ್ವಜನಿಕರು ಆತಂಕಕ್ಕೆ ಈಡಾಗುತ್ತಾರೆ. ಇಂತಹ ಗಾಳಿಸುದ್ದಿಗಳಿಂದ ವನ್ಯಜೀವಿಗಳಿಗೂ ಧಕ್ಕೆಯಾಗುತ್ತದೆ’ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT