ಮಂಗಳವಾರ, ಮಾರ್ಚ್ 2, 2021
23 °C

ಮಾಸ್ಕ್ ಇಲ್ಲದೇ ಓಡಾಟ | ಬಿಬಿಎಂಪಿಯಿಂದ ₹ 51 ಸಾವಿರ ದಂಡ ವಸೂಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್-19 ನಿಯಂತ್ರಣ ಸಲುವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ ಮುಖಗವಸು ಧರಿಸುವುದನ್ನು ಕಡ್ಡಾಯ ಮಾಡಿದರೂ ಕೆಲವರು ಈ ನಿಯಮಪಾಲಿಸುತ್ತಿಲ್ಲ. ಮಾಸ್ಕ್ ಧರಿಸದ 86 ಮಂದಿಗೆ ಬಿಬಿಎಂಪಿ ಶನಿವಾರ ದಂಡ ವಿಧಿಸಿದೆ. ಒಂದೇ ದಿನ ಒಟ್ಟು ₹ 51 ಸಾವಿರ ದಂಡ ಸಂಗ್ರಹಿಸಲಾಗಿದೆ.

ನಗರದ ನಾಗರೀಕರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಇದ್ದರೆ ದಂಡ ವಿಧಿಸುವುದಾಗಿ ಪಾಲಿಕೆ ಗುರುವಾರ ಅಧಿಸೂಚನೆ ಹೊರಡಿಸಿತ್ತು.

ಯಲಹಂಕ ವಲಯ ಹೊರತುಪಡಿಸಿ ಉಳಿದ ಏಳು ವಲಯಗಳಲ್ಲೂ ದಂಡ ಹಾಕಲಾಗಿದೆ. ಬಿಬಿಎಂಪಿಯ ಹಿರಿಯ ಆರೋಗ್ಯ ನಿರೀಕ್ಷಕರು, ಕಿರಿಯ ಆರೋಗ್ಯ ನಿರೀಕ್ಷಕರು ಹಾಗೂ ಮಾರ್ಷಲ್‌ಗಳಿಗೆ ದಂಡ ವಿಧಿಸುವ ಅಧಿಕಾರವನ್ನು ನೀಡಲಾಗಿದೆ.

ಜೆ.ಸಿ.ಗಳಿಗೆ ಮೆಜಿಸ್ಟೀರಿಯಲ್‌ ಅಧಿಕಾರ
ಬಿಬಿಎಂಪಿಯ ಎಲ್ಲ ವಲಯಗಳ ಜಂಟಿ ಆಯುಕ್ತರಿಗೆ ಮೆಜಿಸ್ಟೀಯಲ್‌ ಅಧಿಕಾರವನ್ನು ನೀಡಲಾಗಿದೆ. ಈ ಕುರಿತು ನಗರಾಭಿವೃದ್ಧಿ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು