ಬೆಂಗಳೂರು: ‘ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ. ಆದ್ದರಿಂದ, ರಾಜೀನಾಮೆ ನೀಡುವ ಅಗತ್ಯವಿಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರಿಗೆ ಕೆಟ್ಟು ಹೆಸರು ಬರಬಾರದು ಎಂಬ ಉದ್ದೇಶದಿಂದ ಅವರ ಪತ್ನಿ ಪಾರ್ವತಿ ಅವರು ನಿವೇಶನಗಳನ್ನು ಹಿಂದಿರುಗಿಸಿದ್ದಾರೆ’ ಎಂದರು.
‘ಬಿಜೆಪಿಯವರು ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿದ್ದಾರೆ. ಕೇಂದ್ರ ಸರ್ಕಾರದ 23 ಸಚಿವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಅವರೆಲ್ಲರ ರಾಜೀನಾಮೆ ಕೇಳುವ ಧೈರ್ಯವನ್ನೂ ಬಿಜೆಪಿಯವರು ಪ್ರದರ್ಶಿಸಿಬೇಕು’ ಎಂದು ಸವಾಲು ಹಾಕಿದರು.
‘ನಮ್ಮ ಮೆಟ್ರೊಗೆ ತೆರಿಗೆ ವಿನಾಯಿತಿ ನೀಡಿದಂತೆ ಬಿಎಂಟಿಸಿಗೂ ನೀಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಮೆಟ್ರೊದಲ್ಲಿ ಪ್ರತಿನಿತ್ಯ ಏಳರಿಂದ ಎಂಟು ಲಕ್ಷ ಪ್ರಯಾಣಿಕರು ಸಂಚರಿಸುತ್ತಾರೆ. ಬಿಎಂಟಿಸಿಯಲ್ಲಿ ಪ್ರತಿದಿನ 40 ಲಕ್ಷಕ್ಕೂ ಹೆಚ್ಚು ಜನ ಸಂಚರಿಸುತ್ತಾರೆ’ ಎಂದು ತಿಳಿಸಿದರು.