ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ವರ್ಷದ ಬಹಿರಂಗ ಸಂಭ್ರಮಾಚರಣೆಗೆ ಸರ್ಕಾರದ ಬ್ರೇಕ್‌

Last Updated 11 ಡಿಸೆಂಬರ್ 2020, 16:18 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕವಾಗಿ ಕಾರ್ಯಕ್ರಮ ಆಯೋಜಿಸುವುದನ್ನು ನಿಷೇಧಿಸಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಬೆಂಗಳೂರಿನಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಷೇಧಿಸುವ ಕುರಿತು ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಎಂ.ಜಿ. ರಸ್ತೆ, ಬ್ರಿಗೇಡ್‌ ರಸ್ತೆ ಸೇರಿದಂತೆ ಯಾವ ಪ್ರದೇಶದಲ್ಲೂ ಜನರು ಸಮಾವೇಶಗೊಳ್ಳಲು ಅವಕಾಶ ನೀಡುವುದಿಲ್ಲ‘ ಎಂದರು.

ಡಿಸೆಂಬರ್‌ 20ರಿಂದ ಜನವರಿ 2ರವರೆಗೆ ಬಹಿರಂಗ ಕಾರ್ಯಕ್ರಮಗಳನ್ನು ನಿಷೇಧಿಸುವ ಕುರಿತು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ನೇತೃತ್ವದಲ್ಲಿ ಸದ್ಯವೇ ಉನ್ನತ ಮಟ್ಟದ ಸಭೆ ನಡೆಯಲಿದೆ. ರಾಜ್ಯದಾದ್ಯಂತ ನಿರ್ಬಂಧ ಹೇರುವ ಕುರಿತು ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜನರು ತಮ್ಮ ಮನೆಗಳಲ್ಲೇ ಹೊಸ ವರ್ಷಾಚರಣೆ ನಡೆಸಬಹುದು. ಯಾವುದೇ ರೀತಿಯ ಸಾರ್ವಜನಿಕ ಕಾರ್ಯಕ್ರಮಗಳಿಗೆ ಪರವಾನಗಿ ನೀಡದಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ನಿರ್ದೇಶನ ನೀಡಲಾಗಿದೆ. ಹೋಟೆಲ್‌, ಪಬ್‌, ರೆಸ್ಟೋರೆಂಟ್‌ಗಲ್ಲಿ ನೂರಾರು ಜನರು ಪಾಲ್ಗೊಳ್ಳಲು ಅವಕಾಶವಿಲ್ಲ. ಸಾಮರ್ಥ್ಯದ ಶೇ 50ರಷ್ಟು ಜನರು ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು ಎಂದರು.

ಶೋಕಾಚರಣೆಯ ವರ್ಷ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಮಾತನಾಡಿ, ‘2020 ಎಲ್ಲರ ಪಾಲಿಗೆ ಶೋಕಾಚರಣೆಯ ವರ್ಷವಾಗಿದೆ. ಅನೇಕರು ಕೋವಿಡ್‌ನಿಂದ ಕುಟುಂಬದ ಸದಸ್ಯರು, ಗೆಳೆಯರನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ನಷ್ಟವಾಗಿದೆ. ಇಂತಹ ಸ್ಥಿತಿಯಲ್ಲಿ ಹೊಸ ವರ್ಷಾಚರಣೆಯ ಅನಿವಾರ್ಯ ಏನಿದೆ‘ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT