ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ 6ರಿಂದ 9ರ ವರೆಗಿನ ಆಫ್‌ಲೈನ್ ಕ್ಲಾಸ್‌ ಸ್ಥಗಿತ

ಪರೀಕ್ಷೆ ಕಡ್ಡಾಯ: ಸಚಿವ ಸುರೇಶ್‌ಕುಮಾರ್
Last Updated 1 ಏಪ್ರಿಲ್ 2021, 16:47 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಬೆಂಗಳೂರು ನಗರ ಜಿಲ್ಲೆಯಲ್ಲಿ 6ರಿಂದ 9ನೇ ತರಗತಿಯವರೆಗೆ ಆಫ್‌ಲೈನ್ ಕ್ಲಾಸ್‌ (ಭೌತಿಕ ತರಗತಿ) ಸ್ಥಗಿತಗೊಳಿಸಲಾಗಿದೆ.

‘ತಕ್ಷಣದಿಂದ ಈ ಆದೇಶ ಜಾರಿಗೆ ಬರಲಿದೆ. ಮುಂದಿನ ಆದೇಶದವರೆಗೆ ಇದೇ ಪರಿಸ್ಥಿತಿ ಮುಂದುವರಿಯಲಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಗುರುವಾರ ಹೇಳಿದ್ದಾರೆ.

‘ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ‌ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 10 ನೇ ತರಗತಿಗಳು ಎಂದಿನಂತೆ ಮುಂದುವರಿಯಲಿದ್ದು, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ’ ಎಂದಿದ್ದಾರೆ.

‘ರಾಜ್ಯದ ಉಳಿದೆಡೆ ಪ್ರಸ್ತುತ ಇರುವ ವ್ಯವಸ್ಥೆ ಮುಂದುವರಿಯಲಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಪರೀಕ್ಷೆ: ಕಡ್ಡಾಯ ಶಿಕ್ಷಣ ಕಾಯ್ದೆಯ ಅವಕಾಶಗಳಡಿಯಲ್ಲಿ 6-9ನೇ ತರಗತಿಗಳಿಗೆ ಸಂಬಂಧಿಸಿದಂತೆ ಶಾಲೆಗಳು ನಡೆಸಬೇಕಾದ ಮೌಲ್ಯಾಂಕನ ಪರೀಕ್ಷೆಗಳ ಕುರಿತಂತೆ ಮುಂದಿನ ದಿನಗಳಲ್ಲಿ‌ ಅಗತ್ಯ ನಿರ್ದೇಶನ ನೀಡಲಾಗುವುದು ಎಂದೂ ಸಚಿವರು ಸ್ಪಷ್ಟ ಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT