ಶನಿವಾರ, ಜುಲೈ 2, 2022
25 °C

ಬೆಂಗಳೂರು: ಹಿಜಾಬ್ ಪ್ರತಿಭಟನೆ ಸಿಗದ ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮುಂಬರುವ ಪರೀಕ್ಷೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು’ ಎಂದು ಒತ್ತಾಯಿಸಿ ಮುಸ್ಲಿಂ ಸಮುದಾಯದ ಕೆಲ ವಿದ್ಯಾರ್ಥಿನಿಯರು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ಉಡುಪಿ ಜಿಲ್ಲೆಯಿಂದ ನಗರಕ್ಕೆ ಬಂದಿದ್ದ ಕೆಲ ವಿದ್ಯಾರ್ಥಿನಿಯರು, ಸ್ವಾತಂತ್ರ್ಯ ಉದ್ಯಾನದಲ್ಲಿ ಮಾರ್ಚ್ 26 ರಂದು ಪ್ರತಿಭಟನೆ ನಡೆಸಲು ಅನುಮತಿ ಕೋರಿ ಉಪ್ಪಾರಪೇಟೆ ಠಾಣೆಗೆ ಮನವಿ ಸಲ್ಲಿಸಿದ್ದರು. ಅದಕ್ಕೂ ಮುನ್ನವೇ, ‘ಸ್ವಾತಂತ್ರ್ಯ ಉದ್ಯಾನದಲ್ಲಿ ಮಾರ್ಚ್ 26 ರಂದು ಪ್ರತಿಭಟನೆ ಇದೆ. ಎಲ್ಲರೂ ಬನ್ನಿ’ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಿದ್ದರು.

ಪೊಲೀಸರು, ಪ್ರತಿಭಟನೆಗೆ ಅನು ಮತಿ ನಿರಾಕರಿಸಿದ್ದಾರೆ. ‘ಯಾವುದೇ ಪ್ರತಿ ಭಟನೆ ಇದ್ದರೂ 5 ದಿನ ಮುಂಚಿತವಾಗಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಏಕಾಏಕಿ ಮನವಿ ಕೊಟ್ಟರೆ, ಪ್ರತಿಭಟನೆಗೆ ಅವಕಾಶ ನೀಡಲಾಗದು’ ಎಂದು ಪೊಲೀಸರು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು