ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಾಪ ಎದುರು ಪ್ರತಿಭಟನೆಗಿಲ್ಲ ಅವಕಾಶ: ಪೊಲೀಸ್‌ ಆದೇಶ

Published 9 ಜೂನ್ 2023, 19:31 IST
Last Updated 9 ಜೂನ್ 2023, 19:31 IST
ಅಕ್ಷರ ಗಾತ್ರ

ಬೆಂಗಳೂರು: ಸಮಾನ ಮನಸ್ಕರ ವೇದಿಕೆ ವತಿಯಿಂದ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಕಚೇರಿ ಎದುರು ಇದೇ 12ರಂದು ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಪ್ರತಿಭಟನೆಗೆ ವಿ.ವಿ.ಪುರ ಠಾಣೆ ಪೊಲೀಸರು ಅವಕಾಶ ನಿರಾಕರಿಸಿದ್ದಾರೆ.

ಪ್ರತಿಭಟನೆಗೆ ಅನುಮತಿ ಕೋರಿ ವೇದಿಕೆಯ ಸಂಚಾಲಕ ಶಂಕರ್ ಹೂಗಾರ ಸಲ್ಲಿಸಿದ್ದ ಮನವಿ ಪತ್ರಕ್ಕೆ ಹಿಂಬರಹ ನೀಡಿರುವ ಪೊಲೀಸರು, ‘ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರ ಪ್ರತಿಭಟನೆ ನಡೆಸಲು ಅವಕಾಶವಿದೆ. ಉಳಿದಂತೆ, ನಗರದ ಯಾವ ಭಾಗದಲ್ಲೂ ಪ್ರತಿಭಟನೆ ನಡೆಸಲು ಅವಕಾಶವಿಲ್ಲ. ಹೀಗಾಗಿ, ನಿಮ್ಮ ಪ್ರತಿಭಟನೆಗೆ ಅವಕಾಶ ನೀಡಲಾಗದು’ ಎಂದಿದ್ದಾರೆ.

‘ಜೂನ್ 12ರಂದು ಬೆಳಿಗ್ಗೆ 11ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳುವ ಬಗ್ಗೆ ತಿಳಿಸಿದ್ದೀರಾ. ಮಾಜಿ ಸಚಿವರಾದ ಬಿ.ಟಿ. ಲಲಿತಾ ನಾಯಕ್ ಪ್ರತಿಭಟನಾ ಸಭೆ ಉದ್ಘಾಟಿಸಲಿದ್ದು, 80ರಿಂದ 100 ಜನ ಸೇರುವ ನಿರೀಕ್ಷೆ ಇರುವುದಾಗಿ ಹೇಳಿ, ಅನುಮತಿ ಕೋರಿ ಮನವಿ ಪತ್ರ ಸಲ್ಲಿಸಿದ್ದಿರಾ’ ಎಂದು ಹಿಂಬರಹದಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.

‘ಸ್ವಾತಂತ್ರ್ಯ ಉದ್ಯಾನ ಹೊರತುಪಡಿಸಿ ನಗರದ ಯಾವುದೇ ಸ್ಥಳದಲ್ಲಿ ಪ್ರತಿಭಟನೆ/ಧರಣಿ/ಮೆರವಣಿಗೆ ನಡೆಸಲು ಅವಕಾಶ ನೀಡದಂತೆ ಹೈಕೋರ್ಟ್ ನಿರ್ದೇಶನವಿದೆ. ಈ ರೀತಿ ಎಲ್ಲ ಕಡೆ ಪ್ರತಿಭಟನೆಗೆ ಅವಕಾಶ ನೀಡಿದರೆ, ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಹೀಗಾಗಿ, ಕಸಾಪ ಎದುರು ಪ್ರತಿಭಟನೆಗೆ ಅವಕಾಶವಿಲ್ಲ. ಇದೇ ಪ್ರತಿಭಟನೆಯನ್ನು ನೀವು ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಳ್ಳಲು ಈ ಮೂಲಕ ಸೂಚಿಸಲಾಗಿದೆ’ ಎಂದು ಹಿಂಬರಹದಲ್ಲಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT