ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜೈಲಿನಲ್ಲಿ ನಟ ದರ್ಶನ್‌ಗೆ ವಿಶೇಷ ಸತ್ಕಾರ ಇಲ್ಲ: ಗೃಹ ಸಚಿವ ಪರಮೇಶ್ವರ

Published 2 ಜುಲೈ 2024, 16:08 IST
Last Updated 2 ಜುಲೈ 2024, 16:08 IST
ಅಕ್ಷರ ಗಾತ್ರ

ಬೆಂಗಳೂರು: ‘ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಅವರಿಗೆ ಯಾವುದೇ ರೀತಿಯ ವಿಶೇಷ ಸತ್ಕಾರ ಹಾಗೂ ಸೌಲಭ್ಯ ಕಲ್ಪಿಸುತ್ತಿಲ್ಲ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ವಿಶೇಷ ಸೌಲಭ್ಯ ನೀಡುತ್ತಿರುವ ಆರೋಪದ ಕುರಿತು ಸುದ್ದಿಗಾರರು ಮಂಗಳವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಆರೋಪಕ್ಕೆ ಹಿಂದೆಯೇ ಸ್ಪಷ್ಟನೆ ನೀಡಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ಜೈಲಿನ ಒಳಗೆ ದರ್ಶನ್‌ ಅವರಿಗೆ ಬಿರಿಯಾನಿ ಕೊಡುತ್ತಿಲ್ಲ. ಬೇಕಾದರೆ ನನ್ನ ಜತೆ ಬನ್ನಿ, ಕರೆದುಕೊಂಡು ಹೋಗಿ ತೋರಿಸುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT