ಭಾನುವಾರ, ಜನವರಿ 17, 2021
20 °C

ಸದ್ಯಕ್ಕೆ ಶಾಲೆ ಆರಂಭ ಬೇಡ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೋವಿಡ್ ಕಾರಣ ಡಿಸೆಂಬರ್‌ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪುನರಾರಂಭಿಸುವುದು ಸೂಕ್ತವಲ್ಲ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸಲಹೆ ನೀಡಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಆನ್‌ಲೈನ್ ಮೂಲಕ ಪಾಲ್ಗೊಂಡ ಸುಧಾಕರ್, ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸು ಹಾಗೂ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

‘ಡಿಸೆಂಬರ್‌ ಚಳಿಗಾಲ ಆಗಿದ್ದು, ಸೋಂಕು ಹರಡಲು ಅನುಕೂಲ ಮಾಡಿಕೊಡಬಹುದು. ಕೊರೊನಾದ ಎರಡನೇ ಅಲೆಯೂ ಬರಲಿದೆ ಎಂಬ ಸುದ್ದಿಯೂ ಇರುವುದರಿಂದ ಮುಂದಾಲೋಚನೆ ಮಾಡಬೇಕಿದೆ. ಈ ಕುರಿತು ತಾಂತ್ರಿಕ ಸಲಹಾ ಸಮಿತಿಯ ಸಭೆಯಲ್ಲಿ ಕೂಡ ಚರ್ಚೆಯಾಗಿದ್ದು, ಈಗಾಗಲೇ ಸಭೆಯ ನಿರ್ಣಯವನ್ನು ಸರ್ಕಾರಕ್ಕೆ ತಿಳಿಸಲಾಗಿದೆ’ ಎಂದು ಸಚಿವರು ಹೇಳಿದರು.

‘ಶಾಲೆ ಪುನರಾರಂಭಕ್ಕೆ ಸಂಬಂಧಿಸಿದಂತೆ, ಡಿಸೆಂಬರ್ ಮೂರನೇ ವಾರದಲ್ಲಿ ಸಭೆ ನಡೆಸಿ, ಆ ಸಮಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ತೀರ್ಮಾನ ಕೈಗೊಳ್ಳಬಹುದು’ ಎಂದು ಸಚಿವರು ಸಭೆಗೆ ತಿಳಿಸಿದರು.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು