ಬೆಂಗಳೂರು: ನಗರದ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರ ಸುರಕ್ಷಿತ ಓಡಾಟಕ್ಕೆ ಅನುಕೂಲ ಮಾಡಿಕೊಡಲು ಹೊಸ ನೀತಿ ರೂಪಿಸಲಾಗುವುದು. ಮುಖ್ಯರಸ್ತೆ ಮತ್ತು ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಬಜೆಟ್ ಸಿದ್ಧತೆ ಹಾಗೂ ಜಿಬಿಎ ಕಾರ್ಯಕಾರಿ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರಿಗೆ ಸಭೆಯ ವಿವರ ನೀಡಿದರು.

ನಾಗರಿಕರು ಪಾದಚಾರಿ ಮಾರ್ಗದಲ್ಲಿ ಓಡಾಡಲು ಪರದಾಡುತ್ತಿದ್ದು, ಬೀದಿ ಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗ ಒತ್ತುವರಿ ಮಾಡಿದ್ದಾರೆ. ಅವರಿಗೆ ಪ್ರತ್ಯೇಕ ಜಾಗ ಕಲ್ಪಿಸಲು ತೀರ್ಮಾನಿಸಲಾಗಿದೆ. ಬೀದಿ ವ್ಯಾಪಾರಿಗಳ ವ್ಯಾಪಾರಕ್ಕೆ ನಿರ್ದಿಷ್ಟ ರಸ್ತೆಗಳನ್ನು ನಿಗದಿ ಮಾಡಬೇಕು. ಇದಕ್ಕೆ ಎಲ್ಲಾ ಶಾಸಕರು ಒಮ್ಮತದ ಅಭಿಪ್ರಾಯ ತಿಳಿಸಿದ್ದಾರೆ ಎಂದರು.

‘ಹಗಲು ವೇಳೆ ವ್ಯಾಪಾರ ಮಾಡಿ, ರಾತ್ರಿ ವೇಳೆ ಗಾಡಿಯನ್ನು ಬೀದಿ– ಬದಿಯಲ್ಲಿ ಕಟ್ಟಿ ಹೋಗಿದ್ದರೆ, ಅಧಿಕಾರಿಗಳು ಎಲ್ಲವನ್ನು ಪ್ಯಾಕ್ ಮಾಡಿಕೊಂಡು ಹೋಗಲಿದ್ದಾರೆ. ಈಗಲೇ ಈ ವಿಚಾರದಲ್ಲಿ ವ್ಯಾಪಾರಿಗಳು ಜಾಗೃತರಾಗಿರಬೇಕು’ ಎಂದು ಹೇಳಿದರು.

‘60 ಸಾವಿರ ಬೀದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದು, 30 ಸಾವಿರ ಮಂದಿ ನಮಗೆ ವಾಹನ ಬೇಕು ಎಂದು ಕೇಳಿದ್ದಾರೆ. ಅದಕ್ಕೆ ಟೆಂಡರ್ ಕರೆಯಲಾಗಿದೆ. ಬೀದಿ ಬದಿ ವ್ಯಾಪಾರಿಗಳ ಗುರುತಿನ ಚೀಟಿ ಇದ್ದವರಿಗೆ ಮಾತ್ರ ವ್ಯಾಪಾರ ಮಾಡಲು ಅವಕಾಶ ನೀಡಲಾಗುವುದು. ಯಾರು ಗುರುತಿನ ಚೀಟಿ ಹೊಂದಿಲ್ಲವೊ ಅಂತಹವರಿಗೆ ಬೀದಿ ಬದಿಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ’ ಎಂದರು.

‘ಇವತ್ತು ಜಿಬಿಎ ವ್ಯಾಪ್ತಿಯ ಎಲ್ಲಾ ಶಾಸಕರನ್ನು ಕರೆದು ಪಾಲಿಕೆಗಳ ಬಜೆಟ್ ಕುರಿತು ಸಭೆ ನಡೆಸಲಾಯಿತು. ಇದರ ಜತೆಗೆ ಕೆಲವು ಪ್ರಮುಖ ನಿರ್ಣಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಜಿಬಿಎ ಕಾರ್ಯಕಾರಿ ಸಭೆ ನಡೆಸಲಾಗಿದೆ. ಪೊಲೀಸ್, ಬೆಸ್ಕಾಂ, ಬಿಎಂಆರ್ಸಿಎಲ್, ಜಲಮಂಡಳಿ, ಬಿಡಿಎ ಅಧಿಕಾರಿಗಳು, ಸಚಿವರು, ಶಾಸಕರು, ಸಚಿವರು ಭಾಗವಹಿಸಿದ್ದರು’ ಎಂದು ಹೇಳಿದರು.

‘ಐದೂ ಪಾಲಿಕೆಗಳು ತಮ್ಮದೇ ಆದ ಪ್ರತ್ಯೇಕ ಬಜೆಟ್ ತಯಾರಿಸಿಕೊಂಡಿದ್ದಾರೆ. ಶಾಸಕರೂ ಕೂಡ ತಮ್ಮ ಮನವಿ ಸಲ್ಲಿಸಿದ್ದಾರೆ. ವಾರ್ಡ್ವಾರು ಅನುದಾನ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ’ ಎಂದರು.

‘ಸ್ಥಳೀಯ ಶಾಸಕರ ಜತೆ ಚರ್ಚೆ ಮಾಡಿ ಪಾಲಿಕೆ ವ್ಯಾಪ್ತಿಯ ಉದ್ಯಾನಗಳ ಪ್ರವೇಶಕ್ಕೆ ಯಾವ ಸಮಯ ನೀಡಬೇಕು ಎಂದು ತೀರ್ಮಾನಿಸಲಾಗುವುದು’ ಎಂದು ಅವರು ಹೇಳಿದರು.

‘ಪ್ರತಿ ವಾರ್ಡಿಗೆ ₹5 ಕೋಟಿಯಿಂದ ₹10 ಕೋಟಿ ಅನುದಾನ ಕೇಳುತ್ತಿದ್ದು, ಎಷ್ಟು ನೀಡಲಾಗುವುದು’ ಎಂಬ ಪ್ರಶ್ನೆಗೆ, ‘ನೋಡೋಣ, ಅವರು ಆಕಾಶ ಕೇಳುತ್ತಿದ್ದಾರೆ. ಭೂಮಿಯನ್ನೂ ಕೇಳುತ್ತಿದ್ದಾರೆ’ ಎಂದು ಮಾರ್ಮಿಕವಾಗಿ ನುಡಿದರು.

ಅನಧಿಕೃತ ಫ್ಲೆಕ್ಸ್: ₹1 ಲಕ್ಷದವರೆಗೆ ದಂಡ

‘ಇನ್ನು ಮುಂದೆ ಯಾರು ಅನಧಿಕೃತವಾಗಿ ಫ್ಲೆಕ್ಸ್ ಹಾಕುತ್ತಾರೊ ಅವರಿಗೆ ಪ್ರತಿ ಫ್ಲೆಕ್ಸ್ಗೆ ₹50 ಸಾವಿರದಿಂದ ₹1 ಲಕ್ಷದವರೆಗೆ ದಂಡ ವಿಧಿಸಲು ಸೂಚಿಸಿದ್ದೇನೆ’ ಎಂದು ಶಿವಕುಮಾರ್ ತಿಳಿಸಿದರು.

‘ನಾವು ಎಷ್ಟೇ ಹೇಳಿದರೂ ಫ್ಲೆಕ್ಸ್ ಹಾಕುವುದು ಹೆಚ್ಚುತ್ತಿದೆ. ನಮ್ಮ ಪಕ್ಷವೂ ಸೇರಿ ಎಲ್ಲಾ ಪಕ್ಷದವರೂ ಫ್ಲೆಕ್ಸ್ ಹಾಕುತ್ತಿದ್ದಾರೆ’ ಎಂದರು.

‘ಹುಟ್ಟುಹಬ್ಬ ಶುಭಾಶಯ ಸೇರಿ ವಿವಿಧ ರೀತಿಯ ಫ್ಲೆಕ್ಸ್ ಹಾವಳಿ ಹೆಚ್ಚಾಗಿದೆ. ಸರ್ಕಾರದಿಂದ ಜಾಹೀರಾತು ಪ್ರಕಟಿಸಲು ಕೆಲವು ಜಾಗ ನಿಗದಿ ಮಾಡಿದ್ದು ಅಲ್ಲಿ ಅನುಮತಿ ಪಡೆದು ಹಾಕಿಕೊಳ್ಳಲಿ. ಇದರ ಹೊರತಾಗಿ ಫ್ಲೆಕ್ಸ್ ಹಾಕಿದರೆ ನಂತರದ ಪರಿಣಾಮಗಳನ್ನು ನೀವು ಅನುಭವಿಸಬೇಕಾಗುತ್ತದೆ. ಈ ವಿಚಾರವಾಗಿ ಪೊಲೀಸ್ ಹಾಗೂ ಪಾಲಿಕೆಗಳ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ’ ಎಂದರು.

ಟೋಯಿಂಗ್ ಜಾರಿ

‘ವಾಹನ ನಿಲುಗಡೆಗೆ ರಸ್ತೆಗಳಲ್ಲಿ ನಿಗದಿಪಡಿಸಲಾದ ಸ್ಥಳದ ಹೊರತಾಗಿ ಇತರೆ ಯಾವುದೇ ಪ್ರದೇಶದಲ್ಲಿ ವಾಹನಗಳನ್ನು ನಿಲುಗಡೆ ಮಾಡಿದರೆ ಟೋಯಿಂಗ್ ಮಾಡಲಾಗುತ್ತದೆ’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

‘ಎಲ್ಲಾ ಪಾಲಿಕೆಗಳಿಗೆ ತಲಾ ಎರಡು ಟೋಯಿಂಗ್ ವಾಹನಗಳನ್ನು ನೀಡಿದ್ದೇವೆ. ವಾಹನ ನಿಲುಗಡೆಗೆ ಅವಕಾಶ ಇರದ ಕಡೆ ನಿಲ್ಲಿಸಿದರೆ ಪೊಲೀಸರ ಸಹಕಾರದೊಂದಿಗೆ ಟೋಯಿಂಗ್ ಮಾಡಲಾಗುವುದು’ ಎಂದು ಪ್ರಶ್ನೆಯೊಂದಿಗೆ ಪ್ರತಿಕ್ರಿಯಿಸಿದರು.

‘ವಾಹನಗಳನ್ನು (ಅನಾಥ ವಾಹನ) ವಾರಗಟ್ಟಲೆ ರಸ್ತೆಗಳಲ್ಲಿ ನಿಲ್ಲಿಸಿದ್ದರೆ ಅವುಗಳನ್ನು ಎತ್ತಿಕೊಂಡು ಹೋಗಿ ನಿಗದಿತ ಜಾಗದಲ್ಲಿ ‘ಡಂಪ್’ ಮಾಡಲಾಗುವುದು’ ಎಂದು ಶಿವಕುಮಾರ್ ತಿಳಿಸಿದರು.

‘ಇಂತಹ ವಾಹನಗಳನ್ನು ಕೊಂಡೊಯ್ಯುವ ಜವಾಬ್ದಾರಿಯನ್ನು ಪೊಲೀಸರಿಗೆ ನೀಡಲಾಗಿದೆ. ಬೆಳ್ಳಹಳ್ಳಿ ಸೊಂಡೆಕೊಪ್ಪ ಸೇರಿದಂತೆ ನಾಲ್ಕು ಕಡೆ ಜಾಗ ನಿಗದಿ ಮಾಡಲಾಗಿದೆ. ಇನ್ನು ಕೆಲವು ಜಾಗ ನಿಗದಿ ಮಾಡಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.