ಸೋಮವಾರ, ಏಪ್ರಿಲ್ 6, 2020
19 °C
ಪೌರಕಾರ್ಮಿಕರಿಗೆ 4,300 ಮನೆ–ಬೈರತಿ ಬಸವರಾಜ್‌

ನೀರಿನ ಕೊರತೆ ಇಲ್ಲ: ಬೈರತಿ ಬಸವರಾಜ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗಾರಾಭಿವೃದ್ದಿ ಇಲಾಖೆಯಿಂದ ಪೌರ ಕಾರ್ಮಿಕರಿಗೆ 4,300 ಮನೆ ನಿರ್ಮಾಣಕ್ಕೆ ತಯಾರಿ ನಡೆದಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್‌ ಹೇಳಿದರು.

ಮಂಗಳವಾರ ಇಲ್ಲಿ 10 ಮಹಾನಗರ ಪಾಲಿಕೆಗಳ ಆಯುಕ್ತರ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಬಾರಿ ರಾಜ್ಯದ ಯಾವುದೇ ಮಹಾನಗರಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಎದುರಾಗದು, ನದಿಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಮತ್ತು ದಾವಣಗೆರೆ ಪಾಲಿಕೆ ವ್ಯಾಪ್ತಿ ಸಹಿತ ಉಳಿದೆಡೆ ಪ್ರತಿದಿನ ನೀರು ಪೂರೈಸುವ ವಿಚಾರ ಇದೆ’ ಎಂದರು.

‘ಎಲ್ಲ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡಲು ಸೂಚಿಸಲಾಗಿದೆ’ ಎಂದು ತಿಳಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು