ಬೆಂಗಳೂರು: ವಾಹನ ಮಾಲೀಕರು ತಮ್ಮ ವಾಹನಗಳಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ವಾಹನ್ ತಂತ್ರಾಂಶದಲ್ಲಿ ತುಂಬಿದರೆ ಮಾತ್ರ ಕ್ಲಿಯರೆನ್ಸ್ ಪ್ರಮಾಣ ಪತ್ರ (ಸಿಸಿ), ನಿರಾಪೇಕ್ಷಣ ಪ್ರಮಾಣ ಪತ್ರ (ಎನ್ಒಸಿ) ಸಿಗಲಿದೆ. ಎನ್ಒಸಿ, ಸಿಸಿ ಮಾತ್ರ ನೀಡಲು ಎನ್ಐಸಿ ಅನುವು ಮಾಡಿಕೊಡುವುದಿಲ್ಲ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ತಿಳಿಸಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ದೇಶನದಂತೆ ಎನ್ಐಸಿ ಅಭಿವೃದ್ಧಿಪಡಿಸಿರುವ ಕೇಂದ್ರೀಕೃತ ವೆಬ್ ಆಧಾರಿತ ವಾಹನ್ ತಂತ್ರಾಂಶಗಳನ್ನು 2019ರಿಂದ ಅನ್ವಯವಾಗುವಂತೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಲ್ಲಿ ಅಳವಡಿಸಲಾಗಿದೆ. ಎಲ್ಲ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಈ ತಂತ್ರಾಂಶ ಬಳಕೆಯಲ್ಲಿದೆ.

ವಾಹನ್ ತಂತ್ರಾಂಶದಲ್ಲಿ ಹಾರ್ಸ್ ಪವರ್, ಕ್ಯುಬಿಕ್ ಕೆಪಾಸಿಟಿ, ವೀಲ್ ಬೇಸ್ ಸಹಿತ ಎಲ್ಲ ಮಾಹಿತಿಗಳನ್ನು ಸಂಬಂಧಿಸಿದ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಹಾಜರುಪಡಿಸಿ ವಾಹನದ ಮಾಹಿತಿಯನ್ನು ಅಪ್ಲೋಡ್ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.