ಶುಕ್ರವಾರ, ಜೂನ್ 18, 2021
27 °C

ನೋಡಲ್ ಅಧಿಕಾರಿ ನಾಪತ್ತೆ: ಶಾಸಕ ರಿಜ್ವಾನ್ ಅರ್ಷದ್ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರೆಮ್‌ಡಿಸಿವಿರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಸೇರಿದಂತೆ ಹಲವು ಅಕ್ರಮಗಳು ನಡೆಯುತ್ತಿದ್ದು, ಅದನ್ನು ತಡೆಯಬೇಕಾದ ನೋಡಲ್ ಅಧಿಕಾರಿ ನಾಪತ್ತೆಯಾಗಿದ್ದಾರೆ’ ಎಂದು ಆರೋಪಿಸಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.

ಪೊಲೀಸರು, ‘ಠಾಣೆಗೆ ಬಂದು ಶಾಸಕ ದೂರು ನೀಡಿದ್ದಾರೆ. ಪರಿಶೀಲನೆ ನಡೆಸಲಾಗುತ್ತಿದೆ’ ಎಂದರು.

‘ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂಥ ಸಂದರ್ಭದಲ್ಲಿ ಅಕ್ರಮಗಳೂ ನಡೆಯುತ್ತಿವೆ. ಇದನ್ನು ತಡೆದು ಆಸ್ಪತ್ರೆಗಳ ಜೊತೆ ಸಮನ್ವಯ ಸಾಧಿಸಲು ರಾಜ್ಯ ಸರ್ಕಾರವು ಕೆಂಪಯ್ಯ ಸುರೇಶ್ ಎಂಬುವರನ್ನು ನೋಡಲ್ ಅಧಿಕಾರಿ ಆಗಿ ನೇಮಿಸಿದೆ. ಶಾಸಕನಾದ ನನ್ನ ಕೈಗೂ ಅವರು ಸಿಗುತ್ತಿಲ್ಲ. ಅವರನ್ನು ಹುಡುಕಿಕೊಡಿ’ ಎಂದು ದೂರಿನಲ್ಲಿ ರಿಜ್ವಾನ್ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು