ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರವಾಗಲಿದ್ದಾರೆ ನೋಡಲ್‌ ಅಧಿಕಾರಿಗಳು

ಊಟ – ಧವಸ ಧಾನ್ಯ ವಿತರಣೆಗೆ ಸಮನ್ವಯ ಸಾಧಿಸಲು ಪಾಲಿಕೆ ಕ್ರಮ
Last Updated 2 ಏಪ್ರಿಲ್ 2020, 21:29 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸಲು ಜಾರಿಗೊಳಿಸಿರುವ ಲಾಕ್‌ಡೌನ್ ವೇಳೆ ನಿರಾಶ್ರಿತರಿಗೆ ಹಾಗೂ ಸಂಕಷ್ಟದಲ್ಲಿರುವ ಇತರರಿಗೆ ಊಟದ ವ್ಯವಸ್ಥೆ ಮಾಡುವ ಹಾಗೂ ಧವಸ ಧಾನ್ಯದ ಪೊಟ್ಟಣ ವಿತರಿಸುವ ಕಾರ್ಯದಲ್ಲಿ ಸಮನ್ವಯ ಸಾಧಿಸಲು ಬಿಬಿಎಂಪಿ ನೋಡಲ್‌ ಅಧಿಕಾರಿಗಳನ್ನು ನೇಮಿಸಿದೆ.

ಲಾಕ್‌ಡೌನ್‌ ಜಾರಿಯಲ್ಲಿರುವ ಸಂದರ್ಭದಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲಬಾರದು ಎಂಬ ಕಾರಣಕ್ಕೆ ಸರ್ಕಾರ ಹಾಗೂ ಪಾಲಿಕೆಯಿಂದ ಆಹಾರ ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ. ಸಮಸ್ಯೆ ಎದುರಿಸುತ್ತಿರುವವರಿಗೆ ಆಹಾರ ಅಥವಾ ಇನ್ನಿತರೆ ಅಗತ್ಯ ವಸ್ತುಗಳನ್ನು ಹಂಚುವ ಮೂಲಕ ನೆರವಾಗಲು ಹಲವಾರು ಸರ್ಕಾರೇತರ ಸಂಸ್ಥೆಗಳು ಮುಂದೆ ಬಂದಿವೆ.

ಅಂತಹ ಸಂಸ್ಥೆಗಳು ಪಾಲಿಕೆ ಜೊತೆ ಸಮನ್ವಯ ಕಾಪಾಡಿಕೊಂಡು ನೆರವು ಕಾರ್ಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಂಟಿ ಆಯುಕ್ತ (ಆರೋಗ್ಯ) ಸರ್ಫರಾಜ್ ಖಾನ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳು ಜನರಿಗೆ ನೆರವು ನೀಡುವ ಅನುಮತಿ ಪಡೆಯಲು ಇವರನ್ನು ಸಂಪರ್ಕಿಸಬಹುದು (080-22975591 /9448111066).

ವಲಯವಾರು ಆಹಾರ ಧಾನ್ಯಗಳ ಪೊಟ್ಟಣ ವಿತರಿಸುವ ಕಾರ್ಯದಲ್ಲಿ ಸಮನ್ವಯ ಸಾಧಿಸಲು ವಿಶೇಷ ಆಯುಕ್ತ (ಕಸ ವಿಲೇವಾರಿ) ಡಿ.ರಂದೀಪ್ (9480683398) ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಅಲ್ಲದೇ ಎಲ್ಲಾ ವಲಯಗಳಿಗೆ ಐವರು ಉಸ್ತುವಾರಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಆಹಾರ ಧಾನ್ಯ ವಿತರಣೆ ಉಸ್ತುವಾರಿ ಅಧಿಕಾರಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT