ಬೆಂಗಳೂರು: ಪ್ರತ್ಯೇಕ ಶೇಕಡ 1ರಷ್ಟು ಒಳ ಮೀಸಲಾತಿ ನೀಡಬೇಕೆಂಬ ಬೇಡಿಕೆ ಕುರಿತು ‘ಪರಿಶಿಷ್ಟ ಜಾತಿಯ 59 ಸೂಕ್ಷ್ಮ, ಅತಿ ಸೂಕ್ಷ್ಮ ಅಲೆಮಾರಿಗಳ ಸಮುದಾಯಗಳ ಒಳ ಮೀಸಲಾತಿ ವಂಚಿತ ಹೋರಾಟ ಸಮಿತಿ’ ಪದಾಧಿಕಾರಿಗಳು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಶನಿವಾರ ನಡೆದ ಮಾತುಕತೆ ಫಲಪ್ರದವಾಗಿಲ್ಲ. ಹಾಗಾಗಿ ಅಹೋರಾತ್ರಿ ಧರಣಿ ಮುಂದುವರೆಸಲು ಹೋರಾಟ ಸಮಿತಿ ನಿರ್ಧರಿಸಿದೆ.

ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಆಯೋಗದ ಶಿಫಾರಸಿನಂತೆ ತಮ್ಮ ಸಮುದಾಯವನ್ನು ‘ಪ್ರವರ್ಗ–ಎ’ ನಲ್ಲಿಯೇ ಇರಿಸಿ ಶೇಕಡ 1ರಷ್ಟು ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಅಲೆಮಾರಿ ಸಮುದಾಯ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಶನಿವಾರ ಮೂರನೇ ದಿನಕ್ಕೆ ಕಾಲಿರಿಸಿದೆ.

ಬೇಡಿಕೆ ಈಡೇರಿಕೆ ಕುರಿತು ಅಲೆಮಾರಿ ಮುಖಂಡರು ಹಾಗೂ ಸಿದ್ದರಾಮಯ್ಯ ನಡುವೆ ಚರ್ಚೆ ನಡೆಯಿತು.

ಈ ವೇಳೆ ಮುಖಂಡರು, ‘ದನಿ ಇಲ್ಲದ ಅಲೆಮಾರಿ ಸಮುದಾಯಗಳ ವಿಷಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿಲ್ಲ. ಅಲೆಮಾರಿಗಳನ್ನು ಬಂಜಾರ, ಭೋವಿ, ಕೊರಮ, ಕೊರಚ ಸಮುದಾಯಗಳ ಜೊತೆಗೆ ಸೇರಿಸಿ ಶೇಕಡ 5ರಷ್ಟು ಮೀಸಲಾತಿ ನಿಗದಿ ಮಾಡಿರುವುದರಿಂದ ಅಲೆಮಾರಿ ಸಮುದಾಯಗಳು ಶಾಶ್ವತವಾಗಿ ಮೀಸಲಾತಿಯಿಂದ ವಂಚಿತವಾಗಲಿವೆ. ಶಿಕ್ಷಣ ಸೇರಿ ಎಲ್ಲಾ ಕ್ಷೇತ್ರಗಳಲ್ಲೂ ಸಮುದಾಯ ಹಿಂದುಳಿದಿದೆ. ನಾಗಮೋಹನ ದಾಸ್ ವರದಿ ವೈಜ್ಞಾನಿಕವಾಗಿದ್ದು, ಪ್ರತ್ಯೇಕ ಶೇಕಡ 1ರಷ್ಟು ಮೀಸಲಾತಿ ನೀಡಬೇಕು’ ಎಂಬುದನ್ನು ಸಿದ್ದರಾಮಯ್ಯ ಅವರ ಗಮನಕ್ಕೆ ತಂದರು.

ಸಭೆಯಲ್ಲಿ ಮಾಜಿ ಸಚಿವ ಎಚ್.ಆಂಜನೇಯ, ಅಲೆಮಾರಿ ಸಮುದಾಯದ ಮುಖಂಡರಾದ ಅಂಬಣ್ಣ ಅರೋಲಿಕರ್, ಕವಿತಾ ಬಸವರಾಜು, ಶೇಷಪ್ಪ, ಸಣ್ಣ ಮಾರಪ್ಪ, ಚಾವಡೆ ಲೋಕೇಶ್ ಪಾಲ್ಗೊಂಡಿದ್ದರು.

‘59 ಜಾತಿಯವರಿಗೆ ವಿಶೇಷ ಪ್ಯಾಕೇಜ್ ಭರವಸೆ’

‘ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಡಬೇಕು. ಎಡಗೈ ಮತ್ತು ಬಲಗೈ ಸಮುದಾಯಕ್ಕೆ ತಲಾ ಶೇಕಡ 6ರಷ್ಟು ಒಳ ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಆಗಿದೆ. ಹಾಗಾಗಿ ಹಿಂದೆ ಸರಿಯಲು ಆಗುವುದಿಲ್ಲ. ಮುಂದೆ ನ್ಯಾಯ ಒದಗಿಸಲಾಗುವುದು. 59 ಜಾತಿಗಳಿಗೆ ವಿಶೇಷ ಪ್ಯಾಕೇಜ್ ಮಾಡುವ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಸ್ವಲ್ಪ ಕಾಲಾವಕಾಶ ಬೇಕು’ ಎಂದು ಸಿದ್ದರಾಮಯ್ಯ ತಿಳಿಸಿದರು. ಹಾಗಾಗಿ ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸಲು ನಿರ್ಧರಿಸಲಾಗಿದೆ’ ಎಂದು ಅಲೆಮಾರಿ ಬುಡಕಟ್ಟು ಮಹಾಸಭಾ ರಾಜ್ಯ ಅಧ್ಯಕ್ಷ ಬಿ.ಎಲ್.ಹನುಮಂತಪ್ಪ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.