ಬೆಂಗಳೂರು: ಪರಿಶಿಷ್ಟ ಜಾತಿಯ 59 ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾಗಿ ಎ–ವರ್ಗದಲ್ಲಿ ಶೇ 1ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ಪರಿಶಿಷ್ಟ ಜಾತಿಯ ಸೂಕ್ಷ್ಮ, ಅತಿ ಸೂಕ್ಷ್ಮ ಅಲೆಮಾರಿ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಅಲೆಮಾರಿ ಸಮುದಾಯದ ಸದಸ್ಯರು ತಮ್ಮ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ, ಶಂಖ, ಜಾಗಟೆ, ತಂಬೂರಿ ಬಾರಿಸಿ, ನ್ಯಾಯ ಒದಗಿಸುವಂತೆ ಮನವಿ ಮಾಡಿದರು.

‘ಪರಿಶಿಷ್ಟ ಜಾತಿಗಳಲ್ಲಿ ಯಾವ ಸಮುದಾಯಗಳಿಗೆ ಮೀಸಲಾತಿಯು ಸೂಕ್ತವಾಗಿ ದೊರೆತಿಲ್ಲವೋ ಅಂತಹ ಸಮುದಾಯಗಳಿಗೆ ಅವಕಾಶ ಕಲ್ಪಿಸಬೇಕು. ಶಿಕ್ಷಣ, ಉದ್ಯೋಗ ಇತ್ಯಾದಿ ಕ್ಷೇತ್ರಗಳಲ್ಲಿ ಸಮಾನತೆ ಸಾಧಿಸುವಂತೆ ಮೀಸಲಾತಿ ಹಂಚಿಕೆ ಮಾಡಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಅಖಿಲ ಕರ್ನಾಟಕ ಹಂದಿ ಜೋಗಿ ಸಂಘದ ಅಧ್ಯಕ್ಷ ರಾಜೇಂದ್ರ ಕುಮಾರ್ ಮಾತನಾಡಿ, ‘2025ರ ಆಗಸ್ಟ್ 25ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಅಲೆಮಾರಿಗಳನ್ನು ‘ಸಿ’ ವರ್ಗದಲ್ಲೇ ಮುಂದುವರಿಸಿ ಅನ್ಯಾಯ ಮಾಡಿದೆ. ಒಳ ಮೀಸಲಾತಿ ಜಾರಿ ಕುರಿತು ಚರ್ಚಿಸಲು ಮಾರ್ಚ್ 27ರಂದು ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಈ ಹಿಂದೆ ಅಲೆಮಾರಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಿ ‘ಸಿ’ ವರ್ಗದಿಂದ ಬೇರ್ಪಡಿಸಿ ಸುಪ್ರೀಂ ಕೋರ್ಟ್ ತೀರ್ಪಿನಂತೆ ಹಾಗೂ ಎಲ್ಲಾ ಆಯೋಗಗಳ ವರದಿಯಂತೆ ‘ಎ’ ವರ್ಗದಲ್ಲಿ ಪ್ರತ್ಯೇಕವಾಗಿ ಶೇಕಡ 1ರಷ್ಟು ಮೀಸಲಾತಿ ಕಲ್ಪಿಸಲು ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ವಿರೇಶ್ ಕೆ.ವಿಭೂತಿ ಮಾತನಾಡಿ, ಕೊರಮ, ಕೊರಚ ಸಮುದಾಯಗಳಿಗೆ ನಿವೇಶನ ಹಾಗೂ ಮೂಲ ಸೌಕರ್ಯಗಳಿಗೆ ₹ 500 ಕೋಟಿ ಅನುದಾನ ನೀಡುವ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಸಚಿವರಾದ ಕೆ.ಎಚ್.ಮುನಿಯಪ್ಪ ಮತ್ತು ಎಂ.ಸಿ.ಸುಧಾಕರ್ ಸ್ಥಳಕ್ಕೆ ಭೇಟಿ ನೀಡಿ, ಮನವಿ ಸ್ವೀಕರಿಸಿದರು. ‘ಅಲೆಮಾರಿ ಸಮುದಾಯಕ್ಕೆ ಶೇಕಡ 1ರಷ್ಟು ಮೀಸಲಾತಿ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಿ, ನ್ಯಾಯ ಒದಗಿಸಲು ಪ್ರಯತ್ನಿಸಲಾಗುವುದು’ ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಮಹಾಂತೇಶ್ ಸಣಕಲ್, ಶಿವಕುಮಾರ್, ಲೋಹಿತ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.