ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಗದ ಹಕ್ಕುಪತ್ರ: ಪ್ರತಿಭಟನೆ

Last Updated 13 ಫೆಬ್ರವರಿ 2023, 4:40 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ‘ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ 2018ರಿಂದ ಇಲ್ಲಿಯವರೆಗೆ ಸಾಕಷ್ಟು ಅನುದಾನ ಬಂದಿದ್ದರೂ ಅಭಿವೃದ್ಧಿ ಕಂಡಿಲ್ಲ. ಶಾಸಕರು ಅನುದಾನ ಬಂದಿಲ್ಲವೆಂದು ಸುಳ್ಳು ಹೇಳಿಕೊಂಡು ಓಡಾಟ ನಡೆಸುತ್ತಿದ್ದಾರೆ’ ಎಂದು ದಾಸರಹಳ್ಳಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಜಿ. ಧನಂಜಯ ಆರೋಪಿಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ಅವರು, ’ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶಿವಾನಂದನಗರ, ಹೆಗ್ಗನಹಳ್ಳಿ, ರಾಜಗೋಪಾಲನಗರ, ಮಂಜುನಾಥನಗರ, ಮಲ್ಲಸಂದ್ರದಲ್ಲಿ ಈ ಹಿಂದೆಯೇ ಬಡವರಿಗೆ ನಿವೇಶನಗಳನ್ನು ನೀಡಲಾಗಿತ್ತು. ಆದರೆ, ಇಂದಿನವರೆಗೂ ಹಲವರಿಗೆ ಹಕ್ಕುಪತ್ರ ಸಿಕ್ಕಿಲ್ಲ. ಶಾಸಕರ ಹಿಂಬಾಲಕರಿಗಷ್ಟೇ ಈ ಯೋಜನೆ ಸೌಲಭ್ಯ ಸಿಕ್ಕಿದೆ. ಬಡವರಿಗೆ ಏನೂ ಇಲ್ಲ’ ಎಂದು ವಾಗ್ದಾಳಿ ನಡೆಸಿದರು.‌

ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು ನಂತರ ಬಿಡುಗಡೆ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT