ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಿ.ಜಿ. ಅವಟಿ, ‘ಸಂಸದ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸುತ್ತಾರೆ. ಹಾಸ್ಯ ಕಲಾವಿದ ಬಸವರಾಜ ಮಹಾಮನಿ ಅವರಿಂದ ಹಾಸ್ಯ ಕಾರ್ಯಕ್ರಮ, ಜೀವನ್ ಸಾಬ್ ತಂಡದಿಂದ ಜಾನಪದ ಗೀತೆಗಳ ಗಾಯನ ನಡೆಯಲಿದೆ. ಭರತನಾಟ್ಯ, ಭಾವಗೀತೆಗಳ ಗಾಯನ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ. ಉತ್ತರ ಕರ್ನಾಟಕ ಶೈಲಿಯ ರೊಟ್ಟಿ ಊಟದ ವ್ಯವಸ್ಥೆಯನ್ನೂ ಮಾಡಲಾಗುತ್ತದೆ’ ಎಂದು ಹೇಳಿದರು.