ಬೆಂಗಳೂರು: ಅರಸೀಕೆರೆ-ಬಾಣಾವರ ಹಾಗೂ ಅರಸೀಕೆರೆ-ಹಬ್ಬನಘಟ್ಟ ನಿಲ್ದಾಣಗಳ ನಡುವೆ ಪ್ರಮುಖ ಸಿಗ್ನಲಿಂಗ್ ಮತ್ತು ಬ್ಲಾಕ್ ಬದಲಾವಣೆ ಕಾಮಗಾರಿಗಳನ್ನು ಆ.24ರಂದು ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಅಂದು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಎಸ್ಎಂವಿಟಿ ಬೆಂಗಳೂರು–ಮೈಸೂರು ಡೈಲಿ ಪ್ಯಾಸೆಂಜರ್ ರೈಲು ಸಂಚಾರ ಆ.23ರಂದು ರದ್ದುಗೊಳ್ಳಲಿದೆ. ಮೈಸೂರು–ಎಸ್ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್, ಶಿವಮೊಗ್ಗ ಟೌನ್–ಮೈಸೂರು– ಶಿವಮೊಗ್ಗ ಟೌನ್ ಡೈಲಿ ಎಕ್ಸ್ಪ್ರೆಸ್, ಅರಸೀಕೆರೆ–ಮೈಸೂರು–ಅರಸೀಕೆರೆ ಡೈಲಿ ಪ್ಯಾಸೆಂಜರ್ ರೈಲುಗಳ ಸಂಚಾರ ಆ.24ರಂದು ಒಂದು ದಿನ ರದ್ದುಗೊಳ್ಳಲಿವೆ.

ಶಿವಮೊಗ್ಗ ಟೌನ್–ಚಿಕ್ಕಮಗಳೂರು ಡೈಲಿ ಪ್ಯಾಸೆಂಜರ್ ರೈಲು ಶಿವಮೊಗ್ಗ ಟೌನ್ ಮತ್ತು ಬೀರೂರು ನಡುವೆ ಭಾಗಶಃ ರದ್ದುಗೊಳ್ಳಲಿದೆ. ಬೀರೂರಿನಿಂದ ನಿಗದಿತ ಸಮಯದಲ್ಲಿ ಪ್ರಯಾಣ ಆರಂಭಿಸಲಿದೆ.

ಯಶವಂತಪುರ–ಬಿಕಾನೇರ್ ದ್ವಿ-ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು 60 ನಿಮಿಷ ತಡವಾಗಿ ಹೊರಡಲಿದೆ. ಮಾರ್ಗ ಮಧ್ಯೆ 90 ನಿಮಿಷ ನಿಯಂತ್ರಿಸಲಾಗುತ್ತದೆ. ಯಶವಂತಪುರ–ಟಾಟಾನಗರ ಸಾಪ್ತಾಹಿಕ ಎಕ್ಸ್ಪ್ರೆಸ್, ಯಶವಂತಪುರ–ಹಜರತ್ ನಿಜಾಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್ಪ್ರೆಸ್, ಕೆಎಸ್ಆರ್ ಬೆಂಗಳೂರು–ಧಾರವಾಡ ಸಿದ್ಧಗಂಗಾ ದೈನಿಕ ಎಕ್ಸ್ಪ್ರೆಸ್ ರೈಲುಗಳನ್ನು ಮಾರ್ಗ ಮಧ್ಯೆ 60–75 ನಿಮಿಷ ನಿಯಂತ್ರಿಸಲಾಗುತ್ತದೆ. ಬೆಳಗಾವಿ–ಮೈಸೂರು ವಿಶ್ವಮಾನವ ದೈನಿಕ ಎಕ್ಸ್ಪ್ರೆಸ್ ರೈಲು 90 ನಿಮಿಷ ನಿಯಂತ್ರಣವಾಗಲಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.