ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಹಾಕುವುದನ್ನು ನಿಯಂತ್ರಿಸಲು ಡಿವಿಷನ್ ಅಧಿಕಾರಿಗಳಿಗೆ ಪ್ರತಿ ದಿನ ಐದು ಪ್ರಕರಣಗಳನ್ನು ದಾಖಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
ವಲಯದ ಜಂಟಿ ಆಯುಕ್ತರಿಗೆ ಇದರ ಜವಾಬ್ದಾರಿ ನೀಡಲಾಗಿದ್ದು, ಅವರು ಪ್ರತಿದಿನ ಇದನ್ನು ಮೇಲ್ವಿಚಾರಣೆ ನಡೆಸಬೇಕು. ಫ್ಲೆಕ್ಸ್ ಹಾಕುವವರ ಮೇಲೆ ಪ್ರಕರಣ ದಾಖಲಿಸುವಾಗ ಖಾಸಗಿ ದೂರು ಎಂದು ದಾಖಲಿಸದೆ, ಸಾರ್ವಜನಿಕ ಸ್ಥಳ ಕುರೂಪಗೊಳಿಸಿದ ಪ್ರಕರಣವಾಗಿ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರ್ ವರಿಷ್ಠರಿಗೂ ಮನವಿ ಮಾಡಿಕೊಳ್ಳಲಾಗಿದೆ ಎಂದರು.
ಕೆಲವು ಪ್ರಕರಣಗಳಲ್ಲಿ ಫ್ಲೆಕ್ಸ್ ಯಾರು ಹಾಕಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ. ಹೀಗಾಗಿ ಪ್ರಕರಣ ದಾಖಲಿಸಲಾಗುತ್ತಿಲ್ಲ ಎಂದು ತುಷಾರ್ ಗಿರಿನಾಥ್ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.