ಭಾನುವಾರ, ನವೆಂಬರ್ 29, 2020
20 °C
ಕೆಪಿಎಸ್‌ಸಿ ಡಿಜಿಟಲ್‌ ಮೌಲ್ಯಮಾಪನದಲ್ಲಿ ಅಕ್ರಮ ಆರೋಪ

ಮೌಲ್ಯಮಾಪನದಲ್ಲಿ ಅಕ್ರಮ ಟಿಸಿಎಸ್‌ಗೆ ನೋಟಿಸ್‌ ಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2015ನೇ ಸಾಲಿನಲ್ಲಿ 428 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ನಡೆಸಿದ ಪರೀಕ್ಷೆಯ ಡಿಜಿಟಲ್‌ ಮೌಲ್ಯಮಾಪನದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಸಿರುವ
ಅರ್ಜಿಗೆ ಸಂಬಂಧಿಸಿದಂತೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌(ಟಿಸಿಎಸ್‌)ಗೆ ನೋಟಿಸ್‌ ಜಾರಿ ಮಾಡುವಂತೆ ಹೈಕೋರ್ಟ್‌ ಆದೇಶಿಸಿದೆ.

ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದ್ದು, ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸುಧನ್ವ ಬಂಡೋಲ್ಕರ್‌ ಮತ್ತು ಇತರ 13 ಅಭ್ಯರ್ಥಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಡಿಜಿಟಲ್‌ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ತಂತ್ರಾಂಶವನ್ನು ದುರ್ಬಳಕೆ ಮಾಡಿಕೊಂಡು ಆಯ್ದ ಅಭ್ಯರ್ಥಿಗಳ ಅಂಕಗಳನ್ನು ತಿರುಚಲಾಗಿದೆ. ಸಾಫ್ಟ್‌ವೇರ್‌ ಮತ್ತು ಮೌಲ್ಯಮಾಪನದ ದತ್ತಾಂಶವನ್ನು ಸಂರಕ್ಷಿಸಿಡಲು ನಿರ್ದೇಶನ ನೀಡಬೇಕು. ಸಾಫ್ಟ್‌ವೇರ್‌ ಅಭಿವೃದ್ಧಿಪಡಿಸಿದ ಟಿಸಿಎಸ್‌ ಕಂಪನಿಯನ್ನೂ ಪ್ರತಿವಾದಿಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಮತ್ತು ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಯೇರೂರ್‌ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿತು. ಟಿಸಿಎಸ್‌ಗೆ ನೋಟಿಸ್‌ ಜಾರಿಗೆ ಆದೇಶಿಸಿದ ನ್ಯಾಯಪೀಠ, ಡಿಸೆಂಬರ್‌ 10ಕ್ಕೆ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.