ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶಾಲೆ, ಕಾಲೇಜು, ದೇವಾಲಯಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿಯಾಗದಿದ್ದರೆ ದಂಡ ಹಾಕಿ, ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳು-2016ಗಳು ಮತ್ತು ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಆದೇಶ ಹೊರಡಿಸಲಾಗಿದ್ದು, ಯಾವ ರೀತಿ ಕ್ರಮ ಕೈಗೊಳ್ಳಬೇಕೆಂಬುದನ್ನೂ ಸೂಚಿಸಲಾಗಿದೆ.

ಪಾಲಿಕೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಶಾಲೆ– ಕಾಲೇಜು, ದೇವಾಲಯಗಳ ಆವರಣದೊಳಗೆ ಪ್ಲಾಸ್ಟಿಕ್ ನಿಷೇಧದ ಫಲಕ ಅಳವಡಿಸಬೇಕು. ನಿರ್ವಹಣಾ ತಂತ್ರಗಳನ್ನು ವಿನ್ಯಾಸಗೊಳಿಸುವ ಮೂಲಕ ಏಕಬಳಕೆ ಪ್ಲಾಸ್ಟಿಕ್ ಅನ್ಳು ಹಂತಹಂತವಾಗಿ ನಿಯಂತ್ರಿಸಿ, ನಿರ್ಮೂಲನೆ ಮಾಡಬೇಕು.

ನಿಯಮಗಳಲ್ಲಿ ಗುರುತಿಸಲಾದ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಮೇಲೆ ವಿಧಿಸಲಾದ ನಿರ್ದಿಷ್ಟ ನಿಷೇಧಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಏಕಬಳಕೆ ಪ್ಲಾಸ್ಟಿಕ್ ಬದಲಾಗಿ ಬಟ್ಟೆ ಅಥವಾ ಕಾಗದದಿಂದ ತಯಾರಾದ ವಸ್ತುಗಳನ್ನು ಬಳಸಬೇಕು.

ನಿಯಮಗಳನ್ನು ಪಾಲಿಸಲು ವಿಫಲವಾದರೆ ಘನತ್ಯಾಜ್ಯ ನಿರ್ವಹಣಾ ಬೈ-ಲಾ ಪ್ರಕಾರ ದಂಡ ವಿಧಿಸಲಾಗುವುದು. ಪಾಲಿಕೆಯಿಂದ ಹೊರಡಿಸಲಾದ ವಿವಿಧ ಆದೇಶಗಳು ಮತ್ತು ನಿಬಂಧನೆಗಳ ಉಲ್ಲಂಘನೆಯು ದಂಡದ ಷರತ್ತು ಮತ್ತು ಕ್ರಮವನ್ನು ಪರಿಗಣಿಸಿ ಕ್ರಮಕೈಗೊಳ್ಳಲಾಗುತ್ತದೆ.

ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಮತ್ತು ಏಕಬಳಕ ಪ್ಲಾಸ್ಟಿಕ್ ಬಳಸುವ ಪರಂಪರೆಯ ಅಭ್ಯಾಸವನ್ನು ತೊಡೆದುಹಾಕಲು ನಿರಂತರ ಪ್ರಯತ್ನಗಳನ್ನು ಮಾಡಬೇಕು. ವಿದ್ಯಾರ್ಥಿಗಳಲ್ಲಿ ‘ಏಕಬಳಕ ಪ್ಲಾಸ್ಟಿಕ್ ತ್ಯಜಿಸಿ’ ಎಂಬ ವಿಷಯದ ಮೇಲೆ ಸ್ಪರ್ಧೆಗಳನ್ನು ನಿಯಮಿತವಾಗಿ ಆಯೋಜಿಸಬೇಕು ಎಂದು ಬಿಬಿಎಂಪಿ ಘನತ್ಯಾಜ್ಯ ನಿರ್ವಹಣಾ ವಿಭಾಗದ ಜಂಟಿ ನಿರ್ದೇಶಕಿ ಪ್ರತಿಭಾ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.