ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ನೋಟಿಸ್‌

Last Updated 6 ನವೆಂಬರ್ 2019, 21:46 IST
ಅಕ್ಷರ ಗಾತ್ರ

ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನೀತಿ ಸಂಹಿತೆಯನ್ನು ಇದೇ 11ಕ್ಕೆ ಮುಂದೂಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

‘15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನೀತಿ ಸಂಹಿತೆ ಅಮಾನತಿನಲ್ಲಿರಿಸಿ 2019ರ ಸೆಪ್ಟೆಂಬರ್ 27 ರಂದು ಚುನಾವಣಾ ಆಯೋಗ ಹೊರಡಿಸಿರುವ ಪತ್ರಿಕಾ ಪ್ರಕಟಣೆ ರದ್ದುಪಡಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ. ವಿಚಾರಣೆಯನ್ನು ಇದೇ 8ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT