‘ಪಕ್ಷದ ಶಿಸ್ತು ಉಲ್ಲಂಘಿಸಿದ ಕಾರಣಕ್ಕೆ ಈ ಹಿಂದೆಯೂ ನಿಮಗೆ ನೋಟಿಸ್ ನೀಡಲಾಗಿತ್ತು. ಅಲ್ಲದೆ, ಇನ್ನು ಮುಂದೆ ಈ ರೀತಿ ಹೇಳಿಕೆಗಳನ್ನು ನೀಡಬಾರದೆಂದು ಮೌಖಿಕವಾಗಿ ಸಲಹೆ ನೀಡಲಾಗಿತ್ತು. ಆದರೂ, ಪಕ್ಷಕ್ಕೆ ಮುಜುಗರ ಆಗುವಂಥ ಹೇಳಿಕೆಗಳನ್ನು ನೀಡುವುದನ್ನು ಮತ್ತು ಬರಹಗಳನ್ನು ಬರೆಯುವುದನ್ನು ಮುಂದುವರಿಸಿದ್ದೀರಿ. ಈ ಕಾರಣಕ್ಕೆ ತಮ್ಮನ್ನು ಪಕ್ಷದಿಂದ ಯಾಕೆ ಉಚ್ಚಾಟನೆ ಮಾಡಬಾರದು’ ಎಂದು ನೋಟಿಸ್ ನೀಡಿರುವ ಕೆ. ರೆಹಮಾನ್ ಖಾನ್ ನೇತೃತ್ವದ ಸಮಿತಿ, ಏಳು ದಿನಗಳ ಒಳಗೆ ವಿವರಣೆ ನೀಡುವಂತೆ ಸೂಚಿಸಿದೆ.