ಬೆಂಗಳೂರು: ಲಗ್ಗರೆಯಲ್ಲಿ ಶಿಕ್ಷಣ ಇಲಾಖೆಯ ಅನಮತಿ ಪಡೆಯದೆನಡೆಯುತ್ತಿದ್ದ ‘ಲಿಟ್ಲ್ ಕಿಡ್ಜ್’ ಪೂರ್ವ ಪ್ರಾಥಮಿಕ ಶಾಲೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನೋಟಿಸ್ ನೀಡಿದೆ.

‘ಅಕ್ರಮ ಶಾಲೆ ಉದ್ಘಾಟಿಸಿದ ಸಚಿವ ಸುರೇಶ್ ಕುಮಾರ್’ ಎಂಬ ಶಿರೋನಾಮೆಯೊಂದಿಗೆ ಬುಧವಾರ ಸುದ್ದಿ ಪ್ರಕಟವಾದ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಈ ಶಾಲೆಗೆ ನೋಟಿಸ್ ಜಾರಿಗೊಳಿಸಿದ್ದು, ಅನುಮತಿ ಪಡೆಯದೆ ಶಾಲೆ ನಡೆಸುತ್ತಿರುವುದಕ್ಕಾಗಿ ಕ್ರಿಮಿನಲ್ ಪ್ರಕರಣ ಹೂಡುವ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರೊಬ್ಬರಿಗೆ ಸೇರಿದ ಈ ಶಾಲೆಯನ್ನು ಸ್ವತಃ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಉದ್ಘಾಟಿಸಿದ್ದರು. ಇದು ಅನಧಿಕೃತ ಶಾಲೆ ಎಂಬುದು ತಮಗೆ ಗೊತ್ತಿರಲಿಲ್ಲ ಎಂದು ಸಚಿವರು ಹೇಳಿದ್ದರು ಹಾಗೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.