ಬೆಂಗಳೂರು: ಅಭಿಮಾನಿಯೊಬ್ಬರ ಕನ್ನಡಾಭಿಮಾನವನ್ನು ಪಹಲ್ಗಾಮ್ ಘಟನೆಗೆ ಹೋಲಿಕೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾದ ಬೆನ್ನಲ್ಲೇ, ಬಾಲಿವುಡ್ ಗಾಯಕ ಸೋನು ನಿಗಮ್ ಅವರಿಗೆ ನೋಟಿಸ್ ನೀಡಲು ಆವಲಹಳ್ಳಿ ಠಾಣೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಈ ವಿಷಯದಲ್ಲಿ ಸ್ಪಷ್ಟೀಕರಣ ಕೋರಿ ಇ ಮೇಲ್ ಅಥವಾ ನೋಂದಾಯಿತ ಅಂಚೆ ಮೂಲಕ ಎರಡು ದಿನದೊಳಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಯಾವ ಕಾರಣಕ್ಕೆ ಈ ಮಾತು ಹೇಳಿದ್ದೀರಿ? ಪಹಲ್ಗಾಮ್ ದಾಳಿಗೂ ಕನ್ನಡಕ್ಕೂ ಏನು ಸಂಬಂಧ? ಕನ್ನಡದ ಗೌರವಕ್ಕೆ ಧಕ್ಕೆ ಬರುವ ರೀತಿ ಮಾತನಾಡಲು ಯಾರಾದರೂ ಪ್ರಚೋದನೆ ನೀಡಿದ್ದರೆ?’ ಎಂಬುದಾಗಿ ಸೋನು ನಿಗಮ್ ಹೇಳಿಕೆ ಕುರಿತು ಪ್ರಶ್ನೆ ಮಾಡಿ, ಪೊಲೀಸರು ವಿಚಾರಣೆ ನಡೆಸಲಿದ್ದಾರೆ ಎಂದು ಗೊತ್ತಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ (ನಾರಾ ಯಣಗೌಡ ಬಣ) ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ ಅವರ ದೂರು ಆಧರಿಸಿ, ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 351(2)(ಕ್ರಿಮಿನಲ್ ಬೆದರಿಕೆ), 353 (ಸಾರ್ವಜನಿಕ ವಾಗಿ ಕಿರಿಕಿರಿ ಉಂಟು ಮಾಡುವ ಹೇಳಿಕೆಗಳು), 352(1)(ಉದ್ದೇಶ ಪೂರ್ವಕವಾಗಿ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
.ನಾಲ್ಕೈದು ಯುವಕರಿಂದ ಕನ್ನಡದಲ್ಲೇ ಹಾಡುವಂತೆ ಬೆದರಿಕೆ: ಸೋನು ನಿಗಮ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.