ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಕೆರೆ ತುಂಬಿಸುವ ಕಾರ್ಯ ಚುರುಕುಗೊಳಿಸಲು ಸೂಚನೆ

ಅಂತರ್ಜಲ ಹೆಚ್ಚಳಕ್ಕೆ ಅಗತ್ಯ ಕ್ರಮ: ಜಲಮಂಡಳಿ ಅಧ್ಯಕ್ಷ ರಾಮ್‌ಪ್ರಸಾತ್ ಮನೋಹರ್
Published 19 ಮಾರ್ಚ್ 2024, 16:17 IST
Last Updated 19 ಮಾರ್ಚ್ 2024, 16:17 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಅಂತರ್ಜಲ ಕುಸಿತದಿಂದ ನೀರಿನ ಕೊರತೆ ಉಂಟಾಗಿದ್ದು, ಮರುಪೂರಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್‌ಪ್ರಸಾತ್ ಮನೋಹರ್ ಹೇಳಿದರು.

ವೃಷಭಾವತಿ ವ್ಯಾಲಿಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕ, ನಾಯಂಡಹಳ್ಳಿ ಕೆರೆಗೆ ಸಂಸ್ಕರಿಸಿರುವ ನೀರು ತುಂಬಿಸುವ ವ್ಯವಸ್ಥೆಯನ್ನು ಮಂಗಳವಾರ ಪರಿಶೀಲಿಸಿ ಅವರು ಮಾತನಾಡಿದರು.

‘ಎರಡನೇ ಹಂತದಲ್ಲಿ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ ನಾಯಂಡಹಳ್ಳಿ ಕೆರೆ ಸೇರಿದಂತೆ 14 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕೆರೆಗಳಿಗೆ ನೀರನ್ನು ತುಂಬಿಸುವುದು ನಮ್ಮ ಗುರಿಯಾಗಿದೆ. ಕೆಂಗೇರಿ ಕೆರೆ, ದುಬಾಸಿ ಪಾಳ್ಯ, ಹೊಸಹಳ್ಳಿ ಕೆರೆ ಹಾಗೂ ಹಲಗೆವಡೆರಹಳ್ಳಿ ಕೆರೆಗೆ ನೀರು ತುಂಬಿಸುವಂತಹ ಕಾಮಗಾರಿಗಳನ್ನು ಚುರುಕುಗೊಳಿಸಲಾಗುವುದು’ ಎಂದು ತಿಳಿಸಿದರು.

‘ನಗರದಲ್ಲಿ ಅವ್ಯಾಹತವಾಗಿ ಅಂತರ್ಜಲದ ಬಳಕೆ ಆಗುತ್ತಿದೆ. ಮಳೆ ನೀರು ಮರುಪೂರಣ ವ್ಯವಸ್ಥೆ ಇಲ್ಲದಿರುವುದರಿಂದ ಹೆಚ್ಚಿನ ಪ್ರಮಾಣದ ಮಳೆನೀರು ಒಳಚರಂಡಿಗೆ ಹರಿಯುತ್ತಿದೆ. ಇದು ಒಳಚರಂಡಿಯ ವ್ಯವಸ್ಥೆಯ ಮೇಲೆ ಒತ್ತಡವನ್ನು ಹೆಚ್ಚಿಸುತ್ತಿದೆ. ಭವಿಷ್ಯದ ನೀರಿನ ಅವಶ್ಯಕತೆಯನ್ನು ಪೂರೈಸಲು ಅಂತರ್ಜಲ ಮರುಪೂರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT