ಲಾಭದಾಯಕ ಹುದ್ದೆ ಪ್ರಕರಣ: ಎಸ್.ಆರ್.ವಿಶ್ವನಾಥ್‌ಗೆ ನೋಟಿಸ್

ಬೆಂಗಳೂರು: ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರಾಗಿ ಲಾಭದಾಯಕ ಹುದ್ದೆ ಹೊಂದಿರುವ ಎಸ್.ಆರ್. ವಿಶ್ವನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು’ ಎಂದು ಸಲ್ಲಿಸಿರುವ ಅರ್ಜಿ ಕುರಿತಂತೆ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಬೆಂಗಳೂರು ವಕೀಲ ಎ.ಎಸ್. ಹರೀಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಪ್ರಕರಣದ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಶಾಸಕ ಎಸ್.ಆರ್. ವಿಶ್ವನಾಥ್ ಅವರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿತು.
‘2018ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ಯಲಹಂಕ ಕ್ಷೇತ್ರದಿಂದ ಎಸ್.ಆರ್.ವಿಶ್ವನಾಥ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿದ ವಿವರಗಳ ಪ್ರಕಾರ, ವಿಶ್ವನಾಥ್ ಕೃಷಿ ಮತ್ತು ಸಮಾಜ ಸೇವೆಯಲ್ಲಿ ತೊಡಗಿಕೊಂಡ ಹಾಲಿ ಶಾಸಕರಾಗಿದ್ದಾರೆ.
ಸಂವಿಧಾನದ 191(1) (ಎ) ವಿಧಿಯ ಅನುಸಾರ ಸಂಸದರು ಹಾಗೂ ಶಾಸಕರಾದವರು ಕೇಂದ್ರ ಅಥವಾ ರಾಜ್ಯ ಸರ್ಕಾರದಲ್ಲಿ ಯಾವುದೇ ಲಾಭದಾಯಕ ಹುದ್ದೆ ಹೊಂದುವಂತಿಲ್ಲ. ಒಂದು ವೇಳೆ ಲಾಭದಾಯಕ ಹುದ್ದೆ ಹೊಂದಿದ್ದರೆ ಶಾಸಕ ಅಥವಾ ಸಂಸದ ಸ್ಥಾನದಿಂದ ಅನರ್ಹರಾಗುತ್ತಾರೆ’ ಎಂಬುದು ಅರ್ಜಿದಾರರ ವಾದ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.