ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ವಿದ್ಯಾರ್ಥಿನಿಲಯ ಖಾಲಿ ಮಾಡಲು ಸೂಚನೆ; ಆಕ್ರೋಶ

Published 29 ಏಪ್ರಿಲ್ 2023, 5:16 IST
Last Updated 29 ಏಪ್ರಿಲ್ 2023, 5:16 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆದಿರುವ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜಿನ (ಯುವಿಸಿಇ) ವಿದ್ಯಾರ್ಥಿಗಳನ್ನು ಮೇ 1ರಿಂದ ಹೊರ ಹಾಕುವಂತೆ ಬೆಂಗಳೂರು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದ್ದು, ವಿಶ್ವವಿದ್ಯಾಲಯದ ಈ ಸೂಚನೆಗೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯುವಿಸಿಇ ಎಂಜಿನಿಯರಿಂಗ್ ಕಾಲೇಜನ್ನು ಸ್ವಾಯತ್ತ ಸಂಸ್ಥೆಯನ್ನಾಗಿ ಮಾಡಿರುವುದರಿಂದ ಇನ್ನು ಬೆಂಗಳೂರು ವಿಶ್ವವಿದ್ಯಾಯದ ವ್ಯಾಪ್ತಿಗೆ ಒಳಪಡುವುದಿಲ್ಲ. ಹೀಗಾಗಿ, ಯುವಿಸಿಇ ವಿದ್ಯಾರ್ಥಿಗಳಿಗಾಗಿ ಅನುದಾನ ಸಹ ಮಂಜೂರಾಗಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಮೂರು ದಿನಗಳ ಒಳಗೆ ತಾವು ಇದ್ದ ವಸತಿ ನಿಲಯಗಳನ್ನು ಖಾಲಿ ಮಾಡಬೇಕೆಂದು ವಿಶ್ವವಿದ್ಯಾಲಯವು ಆದೇಶ ಹೊರಡಿಸಿದೆ.

ವಿಶ್ವವಿದ್ಯಾಲಯದ ಆದೇಶವನ್ನು ಎಐಡಿಎಸ್ಒ ಖಂಡಿಸಿದೆ. ವಿದ್ಯಾರ್ಥಿಗಳನ್ನು ಬೀದಿಗೆ ತಳ್ಳುತ್ತಿರುವುದು ವಿದ್ಯಾರ್ಥಿ ವಿರೋಧಿ ಧೋರಣೆಯಾಗಿದೆ ಎಂದು ತಿಳಿಸಿದೆ. ಇದರಿಂದ, ವಿದ್ಯಾರ್ಥಿಗಳಿಗೆ ದ್ರೋಹ ಬಗೆದಂತಾಗಿದೆ. ಈ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕೆಂದು  ಆಗ್ರಹಿಸಿದೆ.

ಈ ನಿರ್ಧಾರವನ್ನು ಪುನರ್‌ ಪರಿಶೀಲಿಸುವಂತೆ ಒತ್ತಾಯಿಸಿ ಶುಕ್ರವಾರ ಪದಾಧಿಕಾರಿಗಳು ಕುಲಪತಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT