ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಖ್ಯಾತ ಅಪರಾಧಿ ಉಮೇಶ್ ರೆಡ್ಡಿ ಪೆರೋಲ್ ಅರ್ಜಿ ತಿರಸ್ಕೃತ

Published 27 ಫೆಬ್ರುವರಿ 2024, 23:30 IST
Last Updated 27 ಫೆಬ್ರುವರಿ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಉಮೇಶ್ ರೆಡ್ಡಿಗೆ ಪೆರೋಲ್ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಉಮೇಶ್ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಪೆರೋಲ್ ನೀಡಬೇಕಾದ ಸಂದರ್ಭಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನೂ ಗಮನದಲ್ಲಿ ಇರಿಸಿಕೊಳ್ಳಬೇಕು. ಅರ್ಜಿದಾರರಿಗೆ ಪೆರೋಲ್ ನೀಡಿದಲ್ಲಿ ಆತನ ಅಪರಾಧ ಪ್ರವೃತ್ತಿ ಪುನಃ ಜಾಗೃತವಾಗಬಹುದು ಅಥವಾ ಕಾನೂನು ಸುವ್ಯವಸ್ಥೆಗೆ ಅಪಾಯವನ್ನುಂಟು ಮಾಡಬಹುದು’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

‘ಜೈಲು ಅಧಿಕಾರಿಗಳ ದಾಖಲೆ ಪರಿಶೀಲಿಸಿರುವ ಸುಪ್ರೀಂಕೋರ್ಟ್; ಅರ್ಜಿದಾರರು ಜೈಲಿನಿಂದ ಹೊರಬಂದಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂದು ತಿಳಿಸಿದೆ’ ಎಂಬ ಅಂಶವನ್ನು ಉಲ್ಲೇಖಿಸಿರುವ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಉಮೇಶ್ ರೆಡ್ಡಿ, ಅನಾರೋಗ್ಯಕ್ಕೆ ತುತ್ತಾಗಿರುವ ತಾಯಿಯೊಂದಿಗೆ ಇರಲು 30 ದಿನಗಳ ಕಾಲ ಪೆರೋಲ್ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT