ಸೋಮವಾರ, ಆಗಸ್ಟ್ 26, 2019
27 °C

ಹಿರಿಯ ಸಾಹಿತಿ, ಕಾದಂಬರಿಕಾರ ಶೇಷನಾರಾಯಣ ನಿಧನ

Published:
Updated:

ಬೆಂಗಳೂರು: ಹಿರಿಯ ಸಾಹಿತಿ, ಕಾದಂಬರಿಕಾರ ಶೇಷನಾರಾಯಣ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. 

ಕಳೆದ ಮೂರು ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ 6.30ಕ್ಕೆ ನಿಧನರಾದರೆಂದು ಅವರ ಕುಟುಂಬ ಮೂಲಗಳು ತಿಳಿಸಿವೆ. 

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 

ಸಾಹಿತ್ಯ ಕೃಷಿ

ಕಥಾ ಸಂಕಲನಗಳು: ಸೀಳುನಾಯಿ, ಮೊಲ್ಲೆ ಮಲ್ಲಿಗೆ (ಬೆಂಗಳೂರು ವಿ.ವಿ.ದ ಪಿಯುಸಿ ಪಠ್ಯ) ಕುಮುದ, ಅಹಲ್ಯೆ ಕಲ್ಲಾಗಲಿಲ್ಲ, ಕೃಷ್ಣನ ಬಲಗಾಲು, ಶಕುನಿಮಾವ.

ಕಾದಂಬರಿಗಳು: ಮೂಲನಕ್ಷತ್ರ, ಕಪಿಲೆ, ಪದ್ಮರಂಗು, ನೊರೆ, ಎರಡು ಉಂಗುರ, ಬೆಳಗಾಯಿತು, ಸೌಮ್ಯ ಮುಂತಾದವು

 ನಾಟಕ, ಮಕ್ಕಳ ಸಾಹಿತ್ಯ, ಜೀವನಚರಿತ್ರೆಗಳು ಸೇರಿದಂತೆ ತಮಿಳಿನಿಂದ ಕನ್ನಡಕ್ಕೆ ಹಲವು ಕೃತಿಗಳನ್ನು ಅನುವಾದಿಸಿದ್ದಾರೆ.

Post Comments (+)