ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ನಾನು ಈಗಲೂ ಟಿಕೆಟ್‌ ಆಕಾಂಕ್ಷಿ: ಸದಾನಂದ ಗೌಡ

Published 9 ಮಾರ್ಚ್ 2024, 16:01 IST
Last Updated 9 ಮಾರ್ಚ್ 2024, 16:01 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ. ನನಗೇ ಟಿಕೆಟ್‌ ಸಿಗುವ ವಿಶ್ವಾಸವಿದೆ’ ಎಂದು ಈ ಕ್ಷೇತ್ರದ ಹಾಲಿ ಸಂಸದ ಡಿ.ವಿ. ಸದಾನಂದ ಗೌಡ ಹೇಳಿದರು.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಬೇರೆಯವರಿಗೆ ಟಿಕೆಟ್‌ ಕೊಡಿ ಎಂದು ಹಿಂದೆ ಹೇಳಿದ್ದೆ. ಕ್ಷೇತ್ರದ ಎಲ್ಲ ಶಾಸಕರು ಮತ್ತು ಮುಖಂಡರು ನೀವೇ ಅಭ್ಯರ್ಥಿಯಾಗಬೇಕು ಎಂದು ಒತ್ತಾಯ ಮಾಡಿದ್ದರು. ಆ ಕಾರಣದಿಂದ ಟಿಕೆಟ್‌ ಬಯಸಿದ್ದೇನೆ’ ಎಂದರು.

‘ಬಿಜೆಪಿ ನನಗೆ ಎಲ್ಲವನ್ನೂ ಕೊಟ್ಟಿದೆ. ಬಿ.ಎಸ್‌. ಯಡಿಯೂರಪ್ಪ ಅವರ ನಂತರದಲ್ಲಿ ನನಗೆ ಹೆಚ್ಚು ಅವಕಾಶಗಳನ್ನು ನೀಡಿದೆ. ಆದರೆ, ಈಗ ಟಿಕೆಟ್‌ ಕೊಡದೇ ಇದ್ದರೆ ಸ್ವಲ್ಪ ನೋವಾಗುತ್ತದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT