ಬೆಂಗಳೂರು: ನೃಪತುಂಗ ವಿಶ್ವವಿದ್ಯಾಲಯದ ಕುಲಪತಿ ಶ್ರೀನಿವಾಸ ಎಸ್. ಬಳ್ಳಿ ಅವರು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಬೆಂಬಲಿಸಿ, ಉನ್ನತ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ.
ಕಸ್ತೂರಿರಂಗನ್ ನೇತೃತ್ವದಲ್ಲಿ ರಚಿಸಲಾದ ಎನ್‌ಇಪಿ ರಾಜಕೀಯ ಹಿತಾಸಕ್ತಿಯಿಂದ ಹೊರತಾಗಿದೆ. ಕರ್ನಾಟಕದಲ್ಲಿ ಜಾರಿಗೊಳಿಸಲಾದ ಹೊಸ ನೀತಿಯು ತ್ರಿಭಾಷಾ ಸೂತ್ರವನ್ನು ಒಳಗೊಂಡಿದ್ದು, ಮಾತೃಭಾಷೆಯಲ್ಲೂ ಕಲಿಕೆಗೆ ಅವಕಾಶ ಮಾಡಿಕೊಟ್ಟಿದೆ. ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯ ಜತೆಗೆ ಇತರೆ ಭಾಷೆಗಳ ಆಯ್ಕೆಯ ಸ್ವಾತಂತ್ರ್ಯ ನೀಡಲಾಗಿದೆ. ದೇಶದ ಇತರೆ ರಾಜ್ಯಗಳು ಎನ್‌ಇಪಿ ಅನುಸರಿಸುವಾಗ ರಾಜ್ಯದಲ್ಲಿ ರದ್ದು ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪ್ರತಿಕೂಲವಾಗುತ್ತದೆ. ಕರ್ನಾಟಕದ ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ಇತರ ರಾಜ್ಯಗಳಿಗೆ ವಲಸೆ ಹೋಗುವ ಸಾಧ್ಯತೆ ಇದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.