ಬೆಂಗಳೂರು: ನಗರದ ನೃಪತುಂಗ ವಿಶ್ವವಿದ್ಯಾಲದಯ ದ್ವಿತೀಯ ಮತ್ತು ತೃತೀಯ ಘಟಿಕೋತ್ಸವ ಜೂನ್ 2ರಂದು ಬೆಳಿಗ್ಗೆ 11ಕ್ಕೆ ಜ್ಞಾನಜ್ಯೊತಿ ಸಭಾಂಗಣದಲ್ಲಿ ನಡೆಯಲಿದೆ.

ಬೇರೆ ಬೇರೆ ಕ್ಷೇತ್ರದ ಒಟ್ಟು ಆರು ಸಾಧಕರಿಗೆ ಗೌರವ ಡಾಕ್ಟರೇಟ್, ವಿವಿಧ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ 18 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿ ಬಿ.ಕೆ. ಮೋಹನ್ಕುಮಾರ್ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಅವರು, ‘ಎರಡು ಶೈಕ್ಷಣಿಕ ವರ್ಷಗಳಲ್ಲಿ ಬಿ.ಎಸ್ಸಿ, ಬಿ.ಸಿ.ಎ, ಎಂ.ಎಸ್ಸಿ ಪೂರ್ಣಗೊಳಿಸಿದ 1,081 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. 2021–24ರಲ್ಲಿ 634 ಹಾಗೂ 2022–25ನೇ ಸಾಲಿನಲ್ಲಿ 428 ವಿದ್ಯಾರ್ಥಿಗಳು ಇದರಲ್ಲಿ ಸೇರಿದ್ದಾರೆ.

2021–24ನೇ ಸಾಲಿಗೆ ಸಂಬಂಧಿಸಿದ ಘಟಿಕೋತ್ಸವದಲ್ಲಿ ಸಾಹಿತಿ ಎಸ್.ಜಿ. ಸಿದ್ದರಾಮಯ್ಯ, ನಟಿ ಜಯಮಾಲ ರಾಮಚಂದ್ರ, ಪಿಡಬ್ಲ್ಯುಡಿ ನಿವೃತ್ತ ಮುಖ್ಯ ಎಂಜಿನಿಯರ್ ಕೆ. ಜಯಪ್ರಕಾಶ್, 2022–25ರ ಸಾಲಿನಲ್ಲಿ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ, ನಿವೃತ್ತ ಐಪಿಎಸ್ ಅಧಿಕಾರಿ ಎಸ್. ಮರಿಸ್ವಾಮಿ, ಐಸಿಡಿಎಸ್ ಜಂಟಿ ನಿರ್ದೇಶಕ ಬಿ.ಎಚ್.ನಿಶ್ಚಲ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು’ ಎಂದರು.

ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಮರ್ಶಕ ಎಚ್.ಎಸ್. ರಾಘವೇಂದ್ರ ರಾವ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ನೃಪತುಂಗ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಮಂಜುನಾಥ ಟಿ.ಎಂ., ಆಡಳಿತ ವಿಭಾಗದ ಕುಲಸಚಿವೆ ಅದಾ ಫಾತಿಮಾ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.