ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 3ಕ್ಕೆ ನೃಪತುಂಗ ವಿ.ವಿ ಉದ್ಘಾಟನೆ: ಶಂಕುಸ್ಥಾಪನೆ ನೆರವೇರಿಸಲಿರುವ ಅಮಿತ್ ಶಾ

Last Updated 1 ಮೇ 2022, 18:26 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನ’ದಡಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ನೃಪತುಂಗ ವಿಶ್ವವಿದ್ಯಾಲಯದ ಉದ್ಘಾಟನಾ ಸಮಾರಂಭವನ್ನು ಇದೇ 3ರಂದು (ಮಂಗಳವಾರ) ಏರ್ಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಶ್ವವಿದ್ಯಾಲಯದ ಶೈಕ್ಷಣಿಕ ಸಮುಚ್ಚಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ’ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

‘ಕಾರ್ಯಕ್ರಮದ ಸಿದ್ಧತೆಗಳನ್ನು ಭಾನುವಾರ ಪರಿಶೀಲಿಸಿದ ಅವರು, ಸರ್ಕಾರಿ ಕಲಾ ಕಾಲೇಜಿನ ಮೈದಾನದಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. 5 ಸಾವಿರ ಜನ ಭಾಗವಹಿಸುವ ನಿರೀಕ್ಷೆಯಿದೆ. ಸಮಾರಂಭವನ್ನು ಚಾರಿತ್ರಿಕ, ಸ್ಮರಣೀಯವಾಗಿ ಏರ್ಪಡಿಸಲಾಗುತ್ತದೆ’ ಎಂದರು.

‘ಮೈಸೂರಿನ ಅರಸ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 100 ವರ್ಷಗಳ ಹಿಂದೆ (1921ರಲ್ಲಿ) ಸ್ಥಾಪಿಸಿದ್ದ ಈ ಶಿಕ್ಷಣ ಸಂಸ್ಥೆಯು ಹಂತಹಂತವಾಗಿ ಬೆಳೆದು ಬಂದಿದೆ. ಇದೀಗ ಸಂಸ್ಥೆ ಪೂರ್ಣಪ್ರಮಾಣದಲ್ಲಿ ವಿಶ್ವವಿದ್ಯಾಲಯದ ರೂಪ ಪಡೆಯುತ್ತಿದೆ.ಸಮಕಾಲೀನ ಅಗತ್ಯಗಳಿಗೆ ತಕ್ಕಂತೆ ವಿಶ್ವವಿದ್ಯಾಲಯ ಶೈಕ್ಷಣಿಕ ಕಾರ್ಯಕ್ರಮಗಳನ್ನು ರೂಪಿಸಲಿದೆ. ಪಠ್ಯದ ಜತೆಗೆ ಕೌಶಲ ಅಭಿವೃದ್ಧಿಗೂ ಆದ್ಯತೆ ಇರಲಿದೆ’ ಎಂದರು.

‘ನೃಪತುಂಗ ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ ಮತ್ತು ಬಿಸಿಎ ಪದವಿಗಳಡಿ 24 ಕೋರ್ಸುಗಳು, 7 ಸ್ನಾತಕೋತ್ತರ ಬೋಧನಾಶಾಖೆಗಳು ಮತ್ತು 3 ಸಂಶೋಧನಾ ಕೇಂದ್ರಗಳು ಇರಲಿವೆ. ವಿಶ್ವವಿದ್ಯಾಲಯಕ್ಕೆ ಕೇಂದ್ರ ಸರ್ಕಾರವು ₹ 55 ಕೋಟಿ ಅನುದಾನ ಮಂಜೂರು ಮಾಡಿದೆ’ ಎಂದರು.

ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯಕ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ನೃಪತುಂಗ ವಿಶ್ವವಿದ್ಯಾಲಯದ ಕುಲಪತಿ ಶ್ರೀನಿವಾಸ ಬಳ್ಳಿ, ಕುಲಸಚಿವ ರಾಮಕೃಷ್ಣ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT