ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸೀದಿ, ಚರ್ಚ್‌, ದೇವಸ್ಥಾನಗಳಲ್ಲಿ ಲೌಡ್‌ಸ್ಪೀಕರ್‌ ಅಳವಡಿಕೆಗೆ ಆಕ್ಷೇಪ

Last Updated 20 ಸೆಪ್ಟೆಂಬರ್ 2021, 19:59 IST
ಅಕ್ಷರ ಗಾತ್ರ

ಬೆಂಗಳೂರು: ‘ಮಸೀದಿ, ಚರ್ಚ್‌ ಮತ್ತು ದೇವಸ್ಥಾನಗಳಲ್ಲಿ ಲೌಡ್‌ಸ್ಪೀಕರ್‌ ಅಳವಡಿಕೆಯಿಂದ ತೀವ್ರ ಸಮಸ್ಯೆಯಾಗುತ್ತಿದೆ’ ಎಂದು ಬಿಜೆಪಿಯ ಡಾ.ವೈ.ಎ. ನಾರಾಯಣಸ್ವಾಮಿ ಅವರು ವಿಧಾನ ಪರಿಷತ್‌ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

‘ಶಬ್ದ ಮಾಲಿನ್ಯವಾಗುತ್ತಿದ್ದರೂ ಪರಿಸರ ಇಲಾಖೆ ಯಾವುದೇ ಕ್ರಮಕೈಗೊಂಡಿಲ್ಲ. ಇಲಾಖೆ ಮಲಗಿದೆಯಾ? ಸತ್ತಿದೆಯಾ?’ ಎಂದು ಕಿಡಿಕಾರಿದರು.

‘ಕಾನೂನು ಉಲ್ಲಂಘಿಸಿ ಬೆಳಿಗ್ಗೆ 5 ಗಂಟೆಗೆ ಲೌಡ್‌ಸ್ಪೀಕರ್‌ ಹಾಕಲಾಗುತ್ತದೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಲೌಡ್‌ಸ್ಪೀಕರ್‌ಗಳಿಗೆ ನಿಷೇಧ ಹೇರಲಾಗಿದೆ. ಅದೇ ರೀತಿ ನಿಯಮ ಇಲ್ಲಿಯೂ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪರಿಸರ ಸಚಿವ ಆನಂದ್‌ ಸಿಂಗ್‌ ಅವರು, ‘ಕೆಲವು ನಿರ್ಬಂಧಗಳನ್ನು ವಿಧಿಸಿ ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ಲೌಡ್‌ಸ್ಪೀಕರ್‌ಗೆ ಅವಕಾಶ ಕಲ್ಪಿಸಲಾಗಿದೆ. ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಲೌಡ್‌ಸ್ಪೀಕರ್‌ಗೆ ನಿಷೇಧಿಸಲಾಗಿದೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT